Homeಮುಖಪುಟತೆಲಂಗಾಣದಲ್ಲಿ 'ರೋಹಿತ್ ವೇಮುಲ ಕಾಯ್ದೆ' ಜಾರಿಗೊಳಿಸುವಂತೆ ಸಿಎಂ ರೇವಂತ್‌ ರೆಡ್ಡಿಗೆ ರಾಹುಲ್ ಗಾಂಧಿ ಪತ್ರ

ತೆಲಂಗಾಣದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಸಿಎಂ ರೇವಂತ್‌ ರೆಡ್ಡಿಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಜಾತಿ ಆಧಾರಿತ ತಾರತಮ್ಯದಿಂದಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಎದುರಿಸಿದ ಅವಮಾನಕರ ಅನುಭವಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ಇಂದಿಗೂ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳ ಲಕ್ಷಾಂತರ ವಿದ್ಯಾರ್ಥಿಗಳು ಇಂತಹ ಕ್ರೂರ ತಾರತಮ್ಯವನ್ನು ಎದುರಿಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ.

ಏಪ್ರಿಲ್ 16ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ರಾಹುಲ್ ಗಾಂಧಿ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಮನವಿ ಮಾಡಿದ್ದರು.

“ರೋಹಿತ್ ವೇಮುಲ, ಪಾಯಲ್ ತದ್ವಿ ಮತ್ತು ದರ್ಶನ್ ಸೋಲಂಕಿಯಂತಹ ಪ್ರತಿಭಾವಂತ ಯುವಜನರ ಹತ್ಯೆ ಒಪ್ಪುವಂತದಲ್ಲ. ಇದಕ್ಕೆ ಅಂತ್ಯ ಹಾಡುವ ಸಮಯ ಇದು. ಡಾ. ಬಿ.ಆರ್ ಅಂಬೇಡ್ಕರ್, ರೋಹಿತ್ ವೇಮುಲ ಮತ್ತು ಲಕ್ಷಾಂತರ ಇತರರು ಅನುಭವಿಸಿರುವುದನ್ನು ಭಾರತದ ಯಾವುದೇ ಮಗು ಎದುರಿಸದಂತೆ ತಡೆಯಲು ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೆ ತರಬೇಕೆಂದು ನಾನು ತೆಲಂಗಾಣ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ರೇವಂತ್ ರೆಡ್ಡಿಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಜನವರಿ 17, 2016ರಂದು ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾರತೀಯ ಉನ್ನತ ಶಿಕ್ಷಣದಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ಎತ್ತಿ ತೋರಿಸಿತ್ತು.

ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ಎಎಸ್‌ಎ) ಸದಸ್ಯರಾಗಿದ್ದ ವೇಮುಲ ಅವರನ್ನು ಬಲಪಂಥೀಯ ವಿದ್ಯಾರ್ಥಿ ಗುಂಪಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜೊತೆಗಿನ ವಿವಾದದ ನಂತರ ಇತರ ನಾಲ್ವರೊಂದಿಗೆ ಅಮಾನತುಗೊಳಿಸಲಾಗಿತ್ತು. ಅಮಾನತು ಮತ್ತು ಫೆಲೋಶಿಪ್ ರದ್ದತಿಯು ಕ್ಯಾಂಪಸ್‌ನಲ್ಲಿ ವೇಮುಲ ಅವರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರತ್ಯೇಕತೆಗೆ ತಳ್ಳಿತ್ತು. ವೇಮುಲ ಸಾವನ್ನು “ಸಾಂಸ್ಥಿಕ ಕೊಲೆ” ಎಂದು ಕರೆಯಲಾಗಿದೆ.

ರೋಹಿತ್ ವೇಮುಲ ತಮ್ಮ ಹೃದಯಸ್ಪರ್ಶಿ ಆತ್ಮಹತ್ಯೆ ಪತ್ರದಲ್ಲಿ, “ಹುಟ್ಟು ನನ್ನ ಮಾರಣಾಂತಿಕ ಅಪಘಾತ” ಎಂದು ಬರೆದಿದ್ದರು. ಅವರ ಸಾವು ದೇಶದಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಜಾತಿ ತಾರತಮ್ಯದ ವಿರುದ್ದ ಪ್ರತಿಭಟನೆಗೆ ಕಿಚ್ಚು ಹಚ್ಚಿತ್ತು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಬಗ್ಗೆ ತೀವ್ರ ಚರ್ಚೆಗಳನ್ನು ಹುಟ್ಟುಹಾಕಿತ್ತು. ನಂತರ ಸರ್ಕಾರಿ ಸಮಿತಿಯೊಂದು ಅವರ ದಲಿತ ಸ್ಥಾನಮಾನವನ್ನು ಪ್ರಶ್ನಿಸಿದರೂ, ಅನೇಕ ಹೋರಾಟಗಾರರು ಮತ್ತು ವಿದ್ವಾಂಸರು ರೋಹಿತ್ ವೇಮುಲ ಸಾವನ್ನು ವ್ಯವಸ್ಥಿತ ಜಾತಿ ದಬ್ಬಾಳಿಕೆಯ ಸಂಕೇತವೆಂದು ಪರಿಗಣಿಸುತ್ತಿದ್ದಾರೆ.

ರೋಹಿತ್ ವೇಮುಲ ಅವರ ಮರಣದ ನಂತರ, ರಾಹುಲ್ ಗಾಂಧಿ ಹೈದರಾಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ಆಧಾರಿತ ತಾರತಮ್ಯದ ವಿರುದ್ಧ ಕಾನೂನು ತರುವುದಾಗಿ ಭರವಸೆ ನೀಡಿದ್ದರು.

2022ರಲ್ಲಿ ಹೈದರಾಬಾದ್‌ನಲ್ಲಿ ನಡೆದ ರಾಹುಲ್ ಗಾಂಧಿಯವರ ‘ಭಾರತ್ ಜೋಡೋ’ ಯಾತ್ರೆಯಲ್ಲಿ ರೋಹಿತ್ ಅವರ ತಾಯಿ ರಾಧಿಕಾ ವೇಮುಲ ಕೂಡ ಭಾಗವಹಿಸಿದ್ದರು. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆಂದು ಊಹಿಸಲಾಗಿತ್ತು. ಆದರೆ, ಅವರ ಸೇರ್ಪಡೆಗೆ ಸ್ಥಳೀಯ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು.

ಕಾಯ್ದೆ ಜಾರಿಗೆ ಮುಂದಾದ ಕರ್ನಾಟಕ

ರಾಹುಲ್ ಗಾಂಧಿ ಪತ್ರದ ಬೆನ್ನಲ್ಲೇ ರೋಹಿತ್ ವೇಮುಲ ಕಾಯ್ದೆ ಜಾರಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಪ್ರಜಾವಾಣಿ ಪತ್ರಿಕೆ ಮಂಗಳವಾರ ವರದಿ ಮಾಡಿದೆ. ‘ಕರ್ನಾಟಕ ರೋಹಿತ್‌ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯದಿಂದ ರಕ್ಷಣೆ) (ಶಿಕ್ಷಣ ಹಕ್ಕು ಮತ್ತು ಘನತೆ) ಮಸೂದೆ– 2025’ರ ಕರಡು ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಎಂದು ವರದಿ ಹೇಳಿದೆ.

ಇಶಾ ಫೌಂಡೇಶನ್ ಶಾಲೆಯ ನಾಲ್ವರು ಸದಸ್ಯರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...