Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು, ಆದರೆ ಅಮೆರಿಕದಿಂದ ರಾಹುಲ್ ಗಾಂಧಿ ಹಸ್ತಕ್ಷೇಪ ಮಾಡಿದ ನಂತರ ಪಕ್ಷದ ನಿರ್ಧಾರ ಬದಲಾಯಿತು” ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅವರು ನನ್ನನ್ನು ತಮ್ಮ ನಿವಾಸಕ್ಕೆ ಕರೆಸಿ, ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು. ನಾನು ಅಂಬುಬಾಚಿ ಮೇಳದ ಮರುದಿನ ಪ್ರಮಾಣವಚನ ಸ್ವೀಕರಿಸುವುದಾಗಿ ಮೇಡಂ ಅವರಿಗೆ ಹೇಳಿದ್ದೆ. ಆದರೆ ನಂತರ ನಮಗೆ ತಿಳಿದುಬಂದ ವಿಷಯವೇನೆಂದರೆ, ಅಮೆರಿಕದಲ್ಲಿದ್ದ ರಾಹುಲ್ ಗಾಂಧಿ ಅವರು ಅಲ್ಲಿಂದಲೇ ಫೋನ್ ಕರೆ ಮಾಡಿದ್ದರು ಮತ್ತು ಅದರ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿರ್ಧಾರವನ್ನು ಬದಲಿಸಿತು” ಎಂದು ಶರ್ಮಾ ಅವರು ತಿಳಿಸಿದ್ದಾರೆ.

ಅದಾದ ನಂತರ, ಕಾಂಗ್ರೆಸ್ ನಾಯಕರು ನನ್ನನ್ನು ಟೀಕಿಸಿದಾಗಲೆಲ್ಲಾ, ಶಾಸಕರು ನನ್ನ (ಶರ್ಮಾ) ಪರವಾಗಿದ್ದಾರೆ ಎಂದು ಖರ್ಗೆ ಅವರು ಅವರಿಗೆ ಹೇಳುತ್ತಿದ್ದರು ಎಂದು ಶರ್ಮಾ ಹೇಳಿಕೊಂಡಿದ್ದಾರೆ.

“ಅಂದು ನ್ಯಾಯ ಸಿಗಲಿಲ್ಲ, ಅದಕ್ಕೆ ಅನೇಕ ಸಾಕ್ಷಿಗಳಿವೆ. ಆದರೆ ಅಂದು ಪ್ರಮಾಣವಚನ ನಡೆಯದೇ ಹೋದದ್ದು ತಾಯಿ ಕಾಮಾಕ್ಯ ಮತ್ತು ಮಹಾಪುರುಷ ಶಂಕರದೇವ ಅವರ ಆಶೀರ್ವಾದ ಎಂದೇ ನಾನು ಭಾವಿಸುತ್ತೇನೆ. ಒಂದು ವೇಳೆ ನಾನು ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದರೆ, ಅದು ನನ್ನ ಜೀವನದ ಮೇಲೆ ಎಂದೆಂದಿಗೂ ಒಂದು ಕಪ್ಪು ಚುಕ್ಕೆಯಾಗಿ ಉಳಿಯುತ್ತಿತ್ತು. ಅಂದು ನನಗೆ ಸನಾತನ ಧರ್ಮಕ್ಕಾಗಿ ಮತ್ತು ಅಸ್ಸಾಮಿ ಜನರಿಗಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಶರ್ಮಾ ಅವರು ಹೇಳಿದ್ದಾರೆ.

ತನ್ನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವುದನ್ನು ರಾಹುಲ್ ಗಾಂಧಿ ತಡೆದಿದ್ದಕ್ಕಾಗಿ ರಾಹುಲ್ ಗಾಂಧಿಯವರಿಗೆ ಧನ್ಯವಾದ ಎಂದ ಶರ್ಮಾ, ರಾಹುಲ್ ಗಾಂಧಿ ಅಂದು ವಿರೋಧ ವ್ಯಕ್ತಪಡಿಸಿದ್ದರಿಂದಲೇ ಇಂದು ನನಗೆ ‘ಸನಾತನ ಧರ್ಮ ಮತ್ತು ಅಸ್ಸಾಂನ ಹಿತದೃಷ್ಟಿಯಿಂದ ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದಿದ್ದಾರೆ.

“ಆ ಸಮಯದಲ್ಲಿ ನನಗೆ ತುಂಬಾ ನೋವಾಗಿತ್ತು, ಆದರೆ ಈಗ ನಾನು ನಂಬುವುದೇನೆಂದರೆ, ಒಬ್ಬರ ಜೀವನದಲ್ಲಿ ಏನೇ ಸಂಭವಿಸಿದರೂ ಅದು ಒಳ್ಳೆಯದಕ್ಕೇ ಆಗಿರುತ್ತದೆ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲೇ ಉಳಿದುಕೊಂಡಿದ್ದರೆ ನನಗೆ ಏನು ಸಿಗುತ್ತಿತ್ತೋ, ಅದಕ್ಕಿಂತ ಹೆಚ್ಚಿನದನ್ನು ದೇವರು ಇಂದು ನನಗೆ ನೀಡಿದ್ದಾನೆ” ಎಂದು ಶರ್ಮಾ ಅವರು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದ ನಂತರ ಶರ್ಮಾ ತಮ್ಮ ಆಪ್ತ ಶಾಸಕರೊಂದಿಗೆ ಬಿಜೆಪಿ ಸೇರಿದರು. 2016ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು, ಸರ್ಬಾನಂದ ಸೋನೋವಾಲ್ ಸಂಪುಟದಲ್ಲಿ ಶರ್ಮಾ ಸಚಿವರಾಗಿ ನೇಮಕಗೊಂಡರು. 2021ರಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಂಡಾಗ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...