Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ತುಕ್ಕುಗುಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗುವುದು.  ಮೊದಲು, ನಾವು ಹಿಂದುಳಿದ ಜಾತಿಗಳು, ಎಸ್ಸಿಗಳು, ಎಸ್ಟಿಗಳು, ಅಲ್ಪಸಂಖ್ಯಾತರು ಮತ್ತು ಇತರ ಜಾತಿಗಳ ನಿಖರವಾದ ಜನಸಂಖ್ಯೆ ಮತ್ತು ಸ್ಥಿತಿಯನ್ನು ತಿಳಿಯಲು ಜಾತಿ ಗಣತಿಯನ್ನು ನಡೆಸುತ್ತೇವೆ. ನಂತರ, ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತೇವೆ, ಬಳಿಕ ನಾವು ಭಾರತದ ಸಂಪತ್ತನ್ನು ಹಂಚುವ ಐತಿಹಾಸಿಕ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತೇವೆ. ಈ ವರ್ಗಗಳಿಗೆ ಉದ್ಯೋಗಗಳು ಮತ್ತು ಇತರ ಕಲ್ಯಾಣ ಯೋಜನೆಗಳನ್ನು ರೂಪಿಸುತ್ತೇವೆ ಎಂದು ಹೇಳಿದ್ದಾರೆ.

ಹಿಂದುಳಿದ ಜಾತಿಗಳು, ದಲಿತರು, ಅಲ್ಪಸಂಖ್ಯಾತರು ಮತ್ತು ಆದಿವಾಸಿಗಳು ಭಾರತದ ಜನಸಂಖ್ಯೆಯ ಸುಮಾರು 90%ರಷ್ಟಿದ್ದಾರೆ, ಆದರೆ ಸರ್ಕಾರಿ ಉದ್ಯೋಗಗಳು, ದೊಡ್ಡ ಕಂಪನಿಗಳು ಮತ್ತು ಇತರ ಕ್ಷೇತ್ರಗಳಲ್ಲಿ ಕಡಿಮೆ ಪಾಲನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸತ್ಯವೆಂದರೆ ಭಾರತದ 90% ಜನಸಂಖ್ಯೆಯು ಸರ್ಕಾರದಲ್ಲಿ ಸಹಭಾಗಿತ್ವ ಅಂದರೆ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರದಲ್ಲಿ ಭಾಗಿಯಾಗಿಲ್ಲ. ದೇಶವನ್ನು ಆಳುವ ಒಟ್ಟು 90 IAS ಅಧಿಕಾರಿಗಳ ಪೈಕಿ ಕೇವಲ ಮೂವರು ಹಿಂದುಳಿದ ವರ್ಗದವರು, ಒಬ್ಬ ಆದಿವಾಸಿ ಮತ್ತು ಮೂವರು ದಲಿತರು ಇದ್ದಾರೆ. ಒಟ್ಟು 100ರೂ. ಖರ್ಚು ಮಾಡುವುದಾದಲ್ಲಿ, ಆ ಪೈಕಿ ಹಿಂದುಳಿದ ವರ್ಗಗಳ ಅಧಿಕಾರಿಗಳು ಒಳಗೊಳ್ಳುವುದು ಕೇವಲ 6 ರೂಪಾಯಿ ಖರ್ಚು ಮಾಡುವ ನಿರ್ಧಾರದಲ್ಲಿ ಮಾತ್ರ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಳೆದ ವರ್ಷ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮೊದಲು ಸೋನಿಯಾ ಗಾಂಧಿ ಪಕ್ಷದ ಆರು ಗ್ಯಾರೆಂಟಿಗಳನ್ನು ಬಿಡುಗಡೆ ಮಾಡಿದ ಸ್ಥಳ ತುಕ್ಕುಗುಡಾ, ಚುನಾವಣೆಯಲ್ಲಿ ಕಾಂಗ್ರೆಸ್ ಬಿಆರ್‌ಎಸ್‌ನ್ನು ಸೋಲಿಸಿದೆ. ಕೇಸರಿ ಪಕ್ಷವು ದ್ವೇಷವನ್ನು ಹರಡುತ್ತಿದೆ ಮತ್ತು ಮೂರನೇ ಅವಧಿಗೆ ಅಧಿಕಾರಕ್ಕೆ ಬರಲು ದೇಶವನ್ನು ವಿಭಜಿಸಲು ಬಯಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

0
ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ...