Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...