Homeಕರ್ನಾಟಕಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಲಿರುವ ರಾಹುಲ್ ಗಾಂಧಿ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಲಿರುವ ರಾಹುಲ್ ಗಾಂಧಿ

ಬುಡಕಟ್ಟು ಸಮುದಾಯ ಸಂಘದೊಂದಿಗೆ ಕೂಡಾ ಅವರು ಸಂವಾದ ನಡೆಸಲಿದ್ದಾರೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ ಐಕ್ಯತಾ ಯಾತ್ರೆ’ಯು ಚಾಮರಾಜನಗರ ಜಿಲ್ಲೆಯ ಮೂಲಕ ಕರ್ನಾಟಕಕ್ಕೆ ಶುಕ್ರವಾರ ಪ್ರವೇಶಿಸಿದೆ. ಪಕ್ಷದ ರಾಷ್ಟ್ರೀಯ ನಾಯಕರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್‌‌ ಸೇರಿದಂತೆ ಪಕ್ಷದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಬೆಂಡಗಳ್ಳಿ ಮೂಲಕ ಹಾದು ಹೋಗಲಿರುವ ರಾಹುಲ್ ಗಾಂಧಿ ನೇತೃತ್ವದ ‘ಭಾರತ ಐಕ್ಯತಾ ಯಾತ್ರೆ’ ಪಾದಯಾತ್ರೆ, ಸಂಜೆ ಬೇಗೂರು ಬಸ್ ನಿಲ್ದಾಣ ಸಮೀಪ ವಿರಮಿಸಲಿದೆ. ಅಲ್ಲಿಂದ ಬೇಗೂರು ಸರ್ಕಾರಿ ಪ್ರೌಢಶಾಲೆಯ ಪಕ್ಕದಲ್ಲಿರುವ ಗ್ರೌಂಡ್ ನಲ್ಲಿ ಮೊದಲ ದಿನದ ಯಾತ್ರೆಯನ್ನು ಮುಗಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ಯಾತ್ರೆಯ ನಡುವಲ್ಲಿ ಎರಡು ಪುಟ್ಟ ಸಂವಾದ ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಮೊದಲ ಕಾರ್ಯಕ್ರಮದಲ್ಲಿ ಚಾಮರಾಜ ನಗರ ಬುಡಕಟ್ಟು ಸಮುದಾಯ ಸಂಘದೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.

ಎರಡನೆ ಕಾರ್ಯಕ್ರಮದಲ್ಲಿ ಕೊರೊನಾ ದುರಂತದ ಸಮಯದಲ್ಲಿ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳೊಂದಿಗೆ ರಾಹುಲ್ ಗಾಂಧಿ ಸಮಾಲೋಚನ ಸಭೆ ನಡೆಸಿ, ಅವರಿಗೆ ಸಾಂತ್ವನ ಹೇಳಲಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

‘ಭಾರತ ಐಕ್ಯತಾ ಯಾತ್ರೆ’ಯು 23 ನೇ ದಿನಕ್ಕೆ ಕಾಲಿಟ್ಟಿದ್ದು, ಇದೇ ಮೊದಲ ಬಾರಿ ಬಿಜೆಪಿ ಆಡಳಿತದ ರಾಜ್ಯವನ್ನು ಪ್ರವೇಶಿಸುತ್ತಿದೆ. ಯಾತ್ರೆ ರಾಜ್ಯಕ್ಕೆ ಆಗಮಿಸುವ ಮುನ್ನ ರಾಜ್ಯದಲ್ಲಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಹಲವಾರು ಪೋಸ್ಟರ್‌ಗಳನ್ನು ಹರಿದು ಹಾಕಲಾಗಿತ್ತು. ಇದು ಬಿಜೆಪಿ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಸುಮಾರು 40ಕ್ಕೂ ಹೆಚ್ಚು ಪೋಸ್ಟರ್‌ಗಳನ್ನು ಹರಿದು ಹಾಕಲಾಗಿದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ‘ಭಾರತ ಐಕ್ಯತಾ ಯಾತ್ರೆ’ | 🛑 Live Updates ಇಲ್ಲಿ ಕ್ಲಿಕ್ ಮಾಡಿ


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...