Homeಕರ್ನಾಟಕರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

ರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2019ರಲ್ಲಿ ಮಾನಹಾನಿಕರ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13 ರವರೆಗೆ ಜಾಮೀನು ನೀಡಿತ್ತು. ಇಂದು ಜಾಮೀನಿನ ಅವಧಿ ಮುಗಿಯಲಿದೆ. ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ಇಂದು ನಡೆಸಲಿದೆ.

ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪಿನಿಂದಾಗಿ ಅವರು ಲೋಕಸಭೆಯಿಂದಲೂ ಅಮಾನತ್ ಆಗಬೇಕಾಯಿತು. ಇದು ರಾಜಕೀಯವಾಗಿ ಭಾರೀ ವಿವಾದವನ್ನು ಹುಟ್ಟುಹಾಕಿತು. ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಲು ಕಾರಣವಾಯಿತು.

ಈ ಬಗ್ಗೆ ಪೂರ್ಣೇಶ್ ಮೋದಿಯವರ ಪ್ರತಿಕ್ರಿಸಿದ್ದು, ”ಪಕ್ಷದ ನಾಯಕರ ತಂಡದೊಂದಿಗೆ ರಾಹುಲ್ ಗಾಂಧಿ ಅವರು ತಮ್ಮ ತೀರ್ಪಿನ ವಿರುದ್ಧ ಮನವಿ ಸಲ್ಲಿಸಿರುವುದು ”ಅತ್ಯಂತ ದುರಹಂಕಾರ”ದ ನಡೆಯಾಗಿದೆ. ರಾಹುಲ್ ಗಾಂಧಿಯನ್ನು ಪದೇಪದೇ ಅಪರಾಧಿ ಎಂದು ಆರೋಪಿಸಿದ ಅವರು, ಕ್ರಿಮಿನಲ್ ಮಾನನಷ್ಟದ 11 ನಿದರ್ಶನಗಳೊಂದಿಗೆ, ”ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ” ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಅಪರಾಧಿ ಎಂದು ಸಾಬೀತಾದ ನಂತರವೂ ರಾಹುಲ್ ಗಾಂಧಿ ಸಾರ್ವಜನಿಕ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ ಎಂದು ಪೂರ್ಣೇಶ್ ಮೋದಿ ಆರೋಪಿಸಿದ್ದಾರೆ.

ಏಪ್ರಿಲ್ 13ರಂದು, ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ನಡೆಸಲಿದೆ. ಇದೇ ವೇಳೆ ಗುಜರಾತ್ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು, ”ಸಂಸದರೊಬ್ಬರು ಯಾವುದೇ ಕಾನೂನನ್ನು ಉಲ್ಲಂಘಿಸಿದರೆ, ಅದು ಸಮಾಜ ಮತ್ತು ನ್ಯಾಯಾಲಯಕ್ಕೆ ಹೆಚ್ಚು ಮಹತ್ವದ ಕಾಳಜಿಯಾಗುತ್ತದೆ ಎಂದು ಹೇಳಿದರು.

”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ನ್ಯಾಯಾಲಯವು ಈ ಹೇಳಿಕೆಯನ್ನು ಮಾನಹಾನಿಕರವೆಂದು ಪರಿಗಣಿಸಿದೆ ಮತ್ತು ರಾಜಕೀಯ ಟೀಕೆ ಮತ್ತು ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಾನಹಾನಿ ಮತ್ತು ಒಂದು ಸಮಾಜದ ಜನರಿಗೆ ನೋವನ್ನುಂಟುಮಾಡುವ ಹೇಳಿಕೆಗಳನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದರು.

ಪಾಟ್ನಾದಲ್ಲೂ ರಾಹುಲ್ ವಿಚಾರಣೆ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಪಾಟ್ನಾದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ”ಮಾರ್ಚ್ 18ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಅವರು, ”ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ” ಎಂದು ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ 2019ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ...