Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ರಾಮಗಢದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಗಾಂಧಿ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ರಾಮಗಢದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಗಾಂಧಿ ಸಂವಾದ

- Advertisement -
- Advertisement -

ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಾಂಡ್‌ನಲ್ಲಿ 4ನೇ ದಿನ ಮುಂದುವರಿದಿದ್ದು, ರಾಮಗಢ ಜಿಲ್ಲೆಯ ಕಲ್ಲಿದ್ದಲು ಪ್ರದೇಶದಲ್ಲಿ ರಾಹುಲ್‌ ಗಾಂಧಿ ಕಾರ್ಮಿಕರ ಜೊತೆ ಸಂವಾದವನ್ನು ನಡೆಸಿದ್ದಾರೆ.

ಭಾನುವಾರ ರಾತ್ರಿ ಜಿಲ್ಲೆಯ ಸಿದ್ದು-ಕನ್ಹು ಮೈದಾನದಲ್ಲಿ ಯಾತ್ರೆ ತಂಗಿತ್ತು, ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಚೌಕ್‌ನಿಂದ ಯಾತ್ರೆ ಪುನರಾರಂಭಗೊಂಡು ಚುಟುಪಾಲು ಕಣಿವೆಗೆ ತೆರಳಿ ಅಲ್ಲಿ ರಾಹುಲ್‌ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರರಾದ ಶಹೀದ್ ಶೇಖ್ ಭಿಖಾರಿ ಮತ್ತು ಟಿಕಾಯ್ತ್ ಉಮಾರೋ ಸಿಂಗ್ ಅವರಿಗೆ ಗೌರವವನ್ನು ಸಲ್ಲಿಕೆ ಮಾಡಿದ್ದಾರೆ.

 

ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷವು ಜಲ್-ಜಂಗಲ್-ಜಮಿನ್ (ನೀರು, ಅರಣ್ಯ ಮತ್ತು ಭೂ ಸಂಪನ್ಮೂಲಗಳ) ವಿಚಾರದಲ್ಲಿ ಆದಿವಾಸಿಗಳ ಹಕ್ಕುಗಳ ಪರವಾಗಿ ಸದಾ ನಿಂತುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ರಾಜ್ಯದ ಉಕ್ಕಿನ ಕಾರ್ಖಾನೆಗಳನ್ನು ತಮ್ಮ ಕೋಟ್ಯಾಧಿಪತಿ ಸ್ನೇಹಿತರಿಗೆ ಹಸ್ತಾಂತರಿಸಲಿದ್ದಾರೆ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ರಾಷ್ಟ್ರದ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಕೆಲವೇ ಕೈಗಳಿಗೆ ಹಸ್ತಾಂತರಿಸುವ ಮೂಲಕ ಆರ್ಥಿಕ ಅನ್ಯಾಯವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವನ್ನು ಒಗ್ಗೂಡಿಸಲು ಮತ್ತು ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ದ್ವೇಷದ ವಿರುದ್ಧ ಹೋರಾಡಲು ಭಾರತ್ ಜೋಡೋ ಯಾತ್ರೆ ಕೈಗೊಂಡಾಗ ನಮಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕಾಂಗ್ರೆಸ್ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತದೆ ಎಂದು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ಯಶಸ್ವಿಯಾಗಿದ್ದೆವು. ಈ ಬಾರಿ ಮಣಿಪುರದಿಂದ ಮಹಾರಾಷ್ಟ್ರಕ್ಕೆ ಯಾತ್ರೆ ಸಾಗುತ್ತಿದ್ದು ನ್ಯಾಯ ಎಂಬ ಇನ್ನೊಂದು ಪದವನ್ನು ಸೇರಿಸಿದ್ದೇವೆ, ಜನರಿಗೆ ಆಗುತ್ತಿರುವ ಆರ್ಥಿಕ ಅನ್ಯಾಯದಂತಹ ಕೆಲವು ಅನ್ಯಾಯಗಳ ವಿರುದ್ಧ ನ್ಯಾಯಕ್ಕಾಗಿ ಒತ್ತಾಯಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು ದೇಶದ ಸಂಪತ್ತನ್ನು ಕೆಲವು ಆಯ್ಕೆಯ ಮಿಲಿಯನೇರ್‌ಗಳಿಗೆ ವರ್ಗಾಯಿಸುವ ಪ್ರಯತ್ನದ ಅನ್ಯಾಯದ ವಿರುದ್ಧ ನಿಲ್ಲುವ ಗುರಿಯನ್ನು ಹೊಂದಿದೆ ಮತ್ತು ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದಿಂದ ಉಂಟಾದ ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತದೆ. ಕೇಂದ್ರ ಸರ್ಕಾರವು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ಅದು ಆದಿವಾಸಿಗಳಂತಹ ಸಾಮಾನ್ಯ ಜನರನ್ನು ಉದ್ಯೋಗದಿಂದ ವಂಚಿಸುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೋ ನ್ಯಾಯ ಯಾತ್ರೆ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಂಚರಿಸಿ ಮಾ.20ರಂದು ಮುಂಬೈನಲ್ಲಿ ಸಮಾಪ್ತಿ ಯಾಗಲಿದೆ.

ಇದನ್ನು ಓದಿ: ಸಾವಿತ್ರಿಬಾಯಿ ಫುಲೆ ವಿವಿಯಲ್ಲಿ ABVP ಕಾರ್ಯಕರ್ತರಿಂದ ದಾಂಧಲೆ: ಕ್ರಮ ಕೈಗೊಳ್ಳದ ಅಧಿಕಾರಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...