Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

- Advertisement -
- Advertisement -

ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಲೋಕಸಭಾ ಸೆಕ್ರಟೇರಿಯಟ್‌ರವರ ಕ್ರಮವನ್ನು ಉಗ್ರವಾಗಿ ಖಂಡಿಸಿರುವ ಕಾಂಗ್ರೆಸ್ ಮತ್ತು ಪ್ರತಿಪಕ್ಷದ ನಾಯಕರು ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಅತ್ಯಂತ ಭಯ. ಹಾಗಾಗಿ ಬಿಜೆಪಿಯವರು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಲು ಎಲ್ಲಾ ರೀತಿಯಲ್ಲಿ ಪ್ರಯತ್ನಿಸಿದರು. ಸತ್ಯ ಹೇಳುವವರನ್ನು ಸದನದಲ್ಲಿ ಇಟ್ಟುಕೊಳ್ಳಲು ಅವರು ಬಯಸುವುದಿಲ್ಲ ಆದರೆ ನಾವು ಸತ್ಯವನ್ನೇ ಮಾತನಾಡುತ್ತೇವೆ. ಜೆಪಿಸಿಗೆ ಬೇಡಿಕೆ ಇಡುತ್ತೇವೆ, ಪ್ರಜಾಪ್ರಭುತ್ವ ಉಳಿಸಲು ಅಗತ್ಯಬಿದ್ದರೆ ಜೈಲಿಗೆ ಹೋಗುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

“ಈ ಕ್ರಮದಿಂದ ನಾವು ಹೆದರುವುದಿಲ್ಲ ಮತ್ತು ಮೌನವಾಗುವುದಿಲ್ಲ. ಪ್ರಧಾನಮಂತ್ರಿ-ಸಂಯೋಜಿತ ಅದಾನಿ ಮಹಾಮೆಗಾ ಹಗರಣಕ್ಕೆ JPC ತನಿಖೆ ನಡೆಸುವುದರ ಬದಲು ರಾಹುಲ್ ಗಾಂಧಿಯವರ ಸಂಸತ್ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಹೋರಾಟವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇವೆ. ಭಾರತೀಯ ಪ್ರಜಾಪ್ರಭುತ್ವ ಓಂ ಶಾಂತಿ” ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ” ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಅದಾನಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ದಿನದಿಂದ ಅವರ ಧ್ವನಿಯನ್ನು ಅಡಗಿಸುವ ಷಡ್ಯಂತ್ರವನ್ನು ಪ್ರಾರಂಭಿಸಲಾಯಿತು. ಅವರಿಗೆ ಎಂದಿಗೂ ಮಾತನಾಡಲು ಅವಕಾಶ ನೀಡಲಿಲ್ಲ, ಇದು ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ಸರ್ವಾಧಿಕಾರಿ ಧೋರಣೆಯ ಸ್ಪಷ್ಟ ನಿದರ್ಶನವಾಗಿದೆ ಎಂದು ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

“ನ್ಯಾಯಾಲಯದ ತೀರ್ಪಿನ 24 ಗಂಟೆಗಳ ಒಳಗೆ ಮತ್ತು ಮೇಲ್ಮನವಿ ಪ್ರಕ್ರಿಯೆಯಲ್ಲಿದೆ ಎಂದು ತಿಳಿದಿದ್ದಾಗಲೂ ಇಷ್ಟು ಬೇಗ ಈ ಕ್ರಮ ತೆಗೆದುಕೊಂಡಿರುವುದರಿಮದ ನಾನು ದಿಗ್ಭ್ರಮೆಗೊಂಡಿದ್ದೇನೆ. ಇದು ಕೈಗವಸುಗಳನ್ನು ಮುಚ್ಚಿದ ರಾಜಕೀಯ ಮತ್ತು ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ” ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.

“ಪ್ರಧಾನಿ ಮೋದಿಯವರ ನವ ಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ವಿರೋಧ ಪಕ್ಷದ ನಾಯಕರನ್ನು ಅವರ ಮಾತಿಗಾಗಿ ಅನರ್ಹಗೊಳಿಸಲಾಗಿದೆ. ಇಂದು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

“ರಾಹುಲ್ ಗಾಂಧಿ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದೆ. ನಮ್ಮ ದೇಶದಲ್ಲಿ ಕಳ್ಳನನ್ನು ಕಳ್ಳ ಎಂದು ಕರೆಯುವುದು ಅಪರಾಧವಾಗಿಬಿಟ್ಟಿದೆ. ಕಳ್ಳರು ಮತ್ತು ಲೂಟಿಕೋರರು ಇನ್ನೂ ಮುಕ್ತರಾಗಿದ್ದಾರೆ ಮತ್ತು ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆ. ಇದು ಪ್ರಜಾಪ್ರಭುತ್ವದ ನೇರ ಕೊಲೆ. ಎಲ್ಲಾ ಸರ್ಕಾರಿ ವ್ಯವಸ್ಥೆಗಳು ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭ. ಹೋರಾಟವೇ ನಮ್ಮೆಲ್ಲದರ ದಾರಿಯಾಗಿದೆ” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.

“ನೀವು ರಾಹುಲ್ ಗಾಂಧಿಯವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿದ ಲೋಕಸಭಾ ಸೆಕ್ರೆಟರಿಯೇಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...