Homeಮುಖಪುಟರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ ವಿರಾಮ

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ ವಿರಾಮ

- Advertisement -
- Advertisement -

ರಾಹುಲ್ ಗಾಂಧಿಯವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಎರಡು ವಿಶೇಷ ಉಪನ್ಯಾಸಗಳನ್ನು ನೀಡಲು ಮತ್ತು ನವದೆಹಲಿಯಲ್ಲಿ ಪ್ರಮುಖ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿರುವ ಕಾರಣ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯು ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಸ್ಥಗಿತಗೊಳ್ಳಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಬುಧವಾರ ಕಾನ್ಪುರದಲ್ಲಿ ಪಾದಯಾತ್ರೆಯ ನಡೆಸಿದ ಬಳಿಕ ಮಾಹಿತಿ ನೀಡಿದ ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಫೆಬ್ರವರಿ 22 ಮತ್ತು 23 ರಂದು ಕೂಡ ಎರಡು ದಿನಗಳ ಕಾಲ ಯಾತ್ರೆಯಿಂದ ವಿರಾಮ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯು ಫೆಬ್ರವರಿ 24ರ ಬೆಳಿಗ್ಗೆ ಉತ್ತರ ಪ್ರದೇಶದ ಮೊರಾದಾಬಾದ್‌ನಿಂದ ಪುನರಾರಂಭಗೊಳ್ಳಲಿದ್ದು, ರಾಜಸ್ಥಾನದ ಧೋಲ್‌ಪುರಕ್ಕೆ ತೆರಳುವ ಮುನ್ನ ಉತ್ತರ ಪ್ರದೇಶದ ಸಂಭಾಲ್, ಅಲಿಗಢ, ಹತ್ರಾಸ್ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ರಾಹುಲ್ ಗಾಂಧಿಯವರು ಯಾತ್ರೆಯಿಂದ ವಿರಾಮ ತೆಗೆದುಕೊಳ್ಳಲಿದ್ದಾರೆ. ಅವರು ಫೆಬ್ರವರಿ 27 ಮತ್ತು ಫೆಬ್ರವರಿ 28 ರಂದು ಎರಡು ದಿನಗಳ ಕಾಲ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಯಲಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೆ, ದೆಹಲಿಯಲ್ಲಿ ಕೆಲ ಪ್ರಮುಖ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಚ್ 2 ರಂದು ಮಧ್ಯಾಹ್ನ 2 ಗಂಟೆಗೆ ರಾಜಸ್ಥಾನದ ಧೋಲ್‌ಪುರದಿಂದ ಯಾತ್ರೆ ಪುನರಾರಂಭಗೊಳ್ಳಲಿದೆ. ಬಳಿಕ ಯಾತ್ರೆಯು ಮಧ್ಯಪ್ರದೇಶದ ಇತರ ಜಿಲ್ಲೆಗಳ ಜೊತೆಗೆ ಮೊರೆನಾ, ಗ್ವಾಲಿಯರ್, ಶಿವಪುರಿ, ಗುನಾ, ಶಾಜಾಪುರ ಮತ್ತು ಉಜ್ಜಯಿನಿಗಳಲ್ಲಿ ಸಂಚರಿಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮಾರ್ಚ್ 5 ರಂದು ಮಧ್ಯಾಹ್ನ 2 ಗಂಟೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆಯಲಿದ್ದಾರೆ ಎಂದು ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಮಣಿಪುರದಿಂದ-ಮುಂಬೈಗೆ 15 ರಾಜ್ಯಗಳ ಮೂಲಕ 6,700 ಕಿಲೋಮೀಟರ್‌ಗಳಷ್ಟು ದೂರದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ರಾಹುಲ್ ಗಾಂಧಿ ಹಮ್ಮಿಕೊಂಡಿದ್ದು, ಪ್ರಸ್ತುತ ಉತ್ತರ ಪ್ರದೇಶದಲ್ಲಿ ಯಾತ್ರೆ ಮುಂದುವರೆಯುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿ ಮಾಡುತ್ತೇವೆ: ರೈತರಿಗೆ ಮಲ್ಲಿಕಾರ್ಜುನ ಖರ್ಗೆ ಭರವಸೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...