Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...