Homeಮುಖಪುಟಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

- Advertisement -
- Advertisement -

2011ರಲ್ಲಿ ಮಾಡಲಾದ ಜಾತಿ ಗಣತಿಯ ಅಂಕಿಅಂಶಗಳನ್ನು ಪ್ರಕಟಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೂ ರಾಹುಲ್‌ ಹೇಳಿಕೆಗೆ ಧ್ವನಿಗೂಡಿಸಿದ್ದು ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

ಜಾತಿ ಗಣತಿಯ ಬಹುದಿನದ ಬೇಡಿಕೆಯನ್ನು ಪ್ರಸ್ತಾಪಿಸಿರುವ ಖರ್ಗೆಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡವನ್ನು ಹೆಚ್ಚಿಸಿದ್ದಾರೆ. ಅಂತಹ ದತ್ತಾಂಶ ಇಲ್ಲವಾದರೆ, ‘ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳ ಮೇಲೆ, ವಿಶೇಷವಾಗಿ ಒಬಿಸಿಗಳ ಮೇಲೆ ಪರಿಣಾಮ ಬೀರಬಹುದು’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

“2011-12ರ ಅವಧಿಯಲ್ಲಿ ಯುಪಿಎ ಸರ್ಕಾರವು ಮೊದಲ ಬಾರಿಗೆ ಸುಮಾರು 25 ಕೋಟಿ ಕುಟುಂಬಗಳನ್ನು ಒಳಗೊಂಡ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು (ಎಸ್‌ಇಸಿಸಿ) ನಡೆಸಿದ್ದು ನಿಮಗೆ (ಪಿಎಂ ಮೋದಿ) ತಿಳಿದಿದೆ. ಮೇ 2014 ರಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಮತ್ತು ಇತರ ಸಂಸದರು ಅದನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರೂ ಹಲವಾರು ಕಾರಣಗಳಿಗಾಗಿ ಜಾತಿ ದತ್ತಾಂಶವನ್ನು ಪ್ರಕಟಿಸಿಲ್ಲ. ನವೀಕರಿಸಲಾದ ಜಾತಿ ಗಣತಿ ಇಲ್ಲದಿರುವಾಗ, ನಾನು ವಿಶ್ವಾಸಾರ್ಹ ದತ್ತಾಂಶಗಳ ಬಗ್ಗೆ ಆತಂಕಗೊಂಡಿದ್ದೇನೆ. ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳಿಗೆ, ವಿಶೇಷವಾಗಿ ಒಬಿಸಿಗಳಿಗೆ ಜಾತಿ ಗಣತಿಯಿಂದ ಅನುಕೂಲವಾಗುತ್ತದೆ” ಎಂದು ಖರ್ಗೆ ತಿಳಿಸಿದ್ದಾರೆ.

2021 ರ ವೇಳೆಗೆ ಮಾಡಬೇಕಾದ ಕೊನೆಯ ಗಣತಿಯನ್ನು ಮುಂದೂಡಲಾಗಿದೆ ಎಂದು ಖರ್ಗೆಯವರು ಕೇಂದ್ರ ಸರ್ಕಾರಕ್ಕೆ ನೆನಪಿಸಿದ್ದಾರೆ. ಕೂಡಲೇ ಗಣತಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ. ಟ್ವಿಟರ್ ಮೂಲಕ ತಮ್ಮ ಪತ್ರವನ್ನು ಸಾರ್ವಜನಿಕಗೊಳಿಸಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2011ರಲ್ಲಿ ಯುಪಿಎ ಸರ್ಕಾರ ನಡೆಸಿದ ಜಾತಿ ಗಣತಿಯನ್ನು ಕೇಂದ್ರವು ಮರೆಮಾಚುತ್ತಿದೆ. ಮೀಸಲಾತಿ ಪಡೆಯುತ್ತಿರುವ ಸಮುದಾಯಗಳಿಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕಳೆದ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ‘ಮೋದಿ’ ಸರ್‌ ನೇಮ್‌ ಬಳಸಿರುವುದಕ್ಕೆ ಸಂಬಂಧಿಸಿದಂತೆ ಶಿಕ್ಷೆ ಪ್ರಕಟಿಸಿದ ಬಳಿಕ ಲೋಕಸಭಾ ಸದಸ್ಯತ್ವದಿಂದ ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಇದೇ ಕೋಲಾರದಲ್ಲಿಯೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ರಾಹುಲ್‌, ಜಾತಿ ಗಣತಿಯ ಪ್ರಸ್ತಾಪ ಮಾಡಿದ್ದಾರೆ. ಒಬಿಸಿ ಸಮುದಾಯದ ಪರ ಮಾತನಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ‘ಮೋದಿ ಸರ್‌ ನೇಮ್‌’ ಪ್ರಕರಣವನ್ನು ಉಲ್ಲೇಖಿಸುತ್ತಾ, “ರಾಹುಲ್ ಗಾಂಧಿಯವರು ಒಬಿಸಿ ಸಮುದಾಯಕ್ಕೆ ಅಗೌರವ ತೋರಿದ್ದಾರೆ” ಎಂದು ಆರೋಪಿಸುತ್ತಿದೆ.

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯು ಗ್ರಾಮೀಣ ಮತ್ತು ನಗರ ಕುಟುಂಬಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಸಮಗ್ರ ಅಧ್ಯಯನವಾಗಿದೆ. ಹೆಚ್ಚುವರಿಯಾಗಿ, ಇದು ಜಾತಿ ಗಣತಿಯನ್ನು ಒಳಗೊಂಡಿದೆ, ಇದು ಜನಸಂಖ್ಯೆಯ ಜಾತಿ ಸಂಯೋಜನೆಯ ಮಾಹಿತಿಯನ್ನು ಒದಗಿಸುತ್ತದೆ. 1931ರ ನಂತರ ಜಾತಿ ಗಣತಿ ಸ್ಥಗಿತವಾಗಿತ್ತು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2011ರಲ್ಲಿ ಮತ್ತೆ ಜಾತಿ ಗಣತಿ ನಡೆಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...