Homeಮುಖಪುಟಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30ರಂದು ಹಿಂಸಾಚಾರದಿಂದ ಕೂಡಿರುವ ಮಣಿಪುರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಮಂಗಳವಾರ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ”ರಾಹುಲ್ ಗಾಂಧಿ ಅವರು ಮಣಿಪುರ ಭೇಟಿಯ ಸಮಯದಲ್ಲಿ ಅವರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಇಂಫಾಲ್ ಮತ್ತು ಚುರಾಚಂದಪುರದಲ್ಲಿ ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

”ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಹೊತ್ತಿ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬೇಕಿದೆ. ಅದಕ್ಕೆ ಸಂತೈಸುವ ಸ್ಪರ್ಶ ಬೇಕಿದೆ. ಆ ಮೂಲಕ ಗಾಯವನ್ನು ಗುಣಪಡಿಸುವ ಅಗತ್ಯವಿದೆ. ಇದು ಮಾನವೀಯ ದುರಂತವಾಗಿದೆ. ದ್ವೇಷವಲ್ಲವನ್ನಲ್ಲ, ಪ್ರೀತಿಯನ್ನು ಶಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಸಮುದಾಯದವರು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಈ ಜನಾಂಗೀಯ ಹಿಂಸಾಚಾರದಿಂದ ರಾಜ್ಯ ಅಕ್ಷರಶಃ ತತ್ತರಿಸಿಹೋಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ, ಒಂದೇ ಒಂದು ಮಾತು ಕೂಡ ಆಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದಲ್ಲಿ ಎನ್ ಬಿರೇನ್ ಸಿಂಗ್ ನೇತೃತ್ವದ-ಬಿಜೆಪಿ ಸರ್ಕಾರದಿಂದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂಬ ಟೀಕೆಗೆ ಗುರಿಯಾಗಿವೆ.

”ರಾಜ್ಯ ಸರ್ಕಾರವು ತನ್ನ ನೌಕರರಿಗೆ ” ನೋ ವರ್ಕ್, ನೋ ಪೇ” ನೀತಿಯನ್ನು ಜಾರಿಗೊಳಿಸಿರುವ ನಿರ್ಧಾರವು ಬಲವಂತದ ಶಾಂತಿಯನ್ನು ಸಾಧಿಸುವ “ಭಯೋತ್ಪಾದಕ ತಂತ್ರ”ವಾಗಿದೆ ಎಂದು ಬುಡಕಟ್ಟು ಗುಂಪಿನ ಉನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಂಗಳವಾರ ಹೇಳಿದೆ.

ರಾಜ್ಯದಲ್ಲಿ ಹಿಂಸಾಚಾರದಿಂದಾಗಿ ಅನಧಿಕೃತ ರಜೆಯಲ್ಲಿರುವ ನೌಕರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸರ್ಕಾರ ತನ್ನ ಎಲ್ಲಾ ಇಲಾಖೆಗಳಿಗೆ ಮಂಗಳವಾರ ಸೂಚಿಸಿದೆ.

”ಅಧಿಕೃತ ರಜೆಯಿಲ್ಲದೆ ತಮ್ಮ ಕರ್ತವ್ಯಕ್ಕೆ ಹಾಜರಾಗದ ಎಲ್ಲಾ ಉದ್ಯೋಗಿಗಳಿಗೆ ಯಾವುದೇ ಕೆಲಸ ಅಥವಾ ವೇತನವನ್ನು ನೀಡಲಾಗುವುದಿಲ್ಲ ಎಂದು ಮಣಿಪುರ ಸರ್ಕಾರ ತನ್ನ ಉದ್ಯೋಗಿಗಳಿಗೆ ತಿಳಿಸಲಾಗಿದೆ” ಎಂದು ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

”ಮಣಿಪುರ ಸರ್ಕಾರದ ಸುಮಾರು ಒಂದು ಲಕ್ಷ ಉದ್ಯೋಗಿಗಳಲ್ಲಿ 65,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಕಿ ಇನ್ಪಿ ಪ್ರಧಾನ ಕಾರ್ಯದರ್ಶಿ ಖೈಖೋಹೌಹ್ ಗಂಗ್ಟೆ ಅವರು ಸಮುದಾಯದ ಜನರು ಇಂಫಾಲ್‌ಗೆ ಹಿಂತಿರುಗಿದರೆ ಅದು ”ಸಾವಿನ ಬಲೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...