Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...