ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಾ, ಕೇವಲ ಇಬ್ಬರ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್ ದರವು 50 ರೂ ಹೆಚ್ಚಳದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಲ್‌ಪಿಜಿ ಗ್ಯಾಸ್ ದರ ಹೆಚ್ಚಳದ ಬಗೆಗಿನ ವರದಿಯೊಂದರ ಚಿತ್ರವನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜನರಿಂದ ಲೂಟಿ ಮಾಡಿ, ಕೇವಲ ಇಬ್ಬರ ವಿಕಾಸ” ಎಂದು ಬರೆದಿದ್ದಾರೆ.
जनता से लूट,
सिर्फ़ ‘दो’ का विकास।#LPGPriceHike pic.twitter.com/GHdNcQJFYq— Rahul Gandhi (@RahulGandhi) February 15, 2021
ಇದನ್ನೂ ಓದಿ: ಹಣ ಎಲ್ಲಿಂದ ಬರುತ್ತದೆ? ಗುಜರಾತಿನ ವ್ಯಾಪಾರಿಗಳಿಂದ ಬರುತ್ತದೆ: ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?
ರಾಹುಲ್ ಗಾಂಧಿ ಆ ಇಬ್ಬರು ಯಾರೆಂದು ನೇರವಾಗಿ ಹೇಳಿಲ್ಲವಾದರೂ, ಅವರು ಪರೋಕ್ಷವಾಗಿ ಬಂಡವಾಳಶಾಹಿಗಳಾದ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿಯನ್ನು ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರವು ಈ ಇಬ್ಬರು ಶ್ರೀಮಂತ್ರ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದೆಯೆ ಹೊರತು ಜನರಿಗಾಗಿ ಅಲ್ಲ ಎಂದು ರಾಹುಲ್ ಗಾಂಧಿ ಹಲವು ಬಾರಿ ಹೇಳಿದ್ದಾರೆ.
ದೆಹಲಿಯಲ್ಲಿ ಭಾನುವಾರದಂದು ಮನೆಬಳಕೆಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 50 ರೂಗಳನ್ನು ಹೆಚ್ಚಿಸಿದ್ದು, ಇದನ್ನು ವಿರೋಧಪಕ್ಷಗಳು ತೀವ್ರವಾಗಿ ವಿರೋಧಿಸಿವೆ. ಹೊಸ ದರದಂತೆ, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 769 ಗಳನ್ನು ಪಾವತಿಸಬೇಕಾಗುತ್ತದೆ. ಫೆಬ್ರವರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಎರಡನೇ ಬೆಲೆ ಏರಿಕೆ ಇದಾಗಿದೆ. ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ ಫೆಬ್ರವರಿ 4 ರಂದು ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆಯನ್ನು ₹ 25 ರಷ್ಟು ಹೆಚ್ಚಿಸಲಾಗಿತ್ತು.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಎಲ್‌ಪಿಜಿ ಬೆಲೆಯು ಏರಿಕೆಯಾಗಿದೆ. ಅಡುಗೆ ಅನಿಲವನ್ನು ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದಿಂದ ತಯಾರಿಸಲಾಗುತ್ತದೆ.
ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ


