Homeಮುಖಪುಟಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌ ಆಕ್ರೋಶ

ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌ ಆಕ್ರೋಶ

- Advertisement -
- Advertisement -

ಸರ್ಕಾರವು ಸಾರ್ವಜನಿಕರಿಂದ ಲೂಟಿ ಮಾಡುತ್ತಾ, ಕೇವಲ ಇಬ್ಬರ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ದರವು 50 ರೂ ಹೆಚ್ಚಳದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಲ್‌ಪಿಜಿ ಗ್ಯಾಸ್ ದರ ಹೆಚ್ಚಳದ ಬಗೆಗಿನ ವರದಿಯೊಂದರ ಚಿತ್ರವನ್ನು ತಮ್ಮ ಟ್ವೀಟ್‌‌ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜನರಿಂದ ಲೂಟಿ ಮಾಡಿ, ಕೇವಲ ಇಬ್ಬರ ವಿಕಾಸ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಹಣ ಎಲ್ಲಿಂದ ಬರುತ್ತದೆ? ಗುಜರಾತಿನ ವ್ಯಾಪಾರಿಗಳಿಂದ ಬರುತ್ತದೆ: ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?

ರಾಹುಲ್ ಗಾಂಧಿ ಆ ಇಬ್ಬರು ಯಾರೆಂದು ನೇರವಾಗಿ ಹೇಳಿಲ್ಲವಾದರೂ, ಅವರು ಪರೋಕ್ಷವಾಗಿ ಬಂಡವಾಳಶಾಹಿಗಳಾದ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿಯನ್ನು ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರವು ಈ ಇಬ್ಬರು ಶ್ರೀಮಂತ್ರ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದೆಯೆ ಹೊರತು ಜನರಿಗಾಗಿ ಅಲ್ಲ ಎಂದು ರಾಹುಲ್ ಗಾಂಧಿ ಹಲವು ಬಾರಿ ಹೇಳಿದ್ದಾರೆ.

ದೆಹಲಿಯಲ್ಲಿ ಭಾನುವಾರದಂದು ಮನೆಬಳಕೆಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 50 ರೂಗಳನ್ನು ಹೆಚ್ಚಿಸಿದ್ದು, ಇದನ್ನು ವಿರೋಧಪಕ್ಷಗಳು ತೀವ್ರವಾಗಿ ವಿರೋಧಿಸಿವೆ. ಹೊಸ ದರದಂತೆ, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 769 ಗಳನ್ನು ಪಾವತಿಸಬೇಕಾಗುತ್ತದೆ. ಫೆಬ್ರವರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಎರಡನೇ ಬೆಲೆ ಏರಿಕೆ ಇದಾಗಿದೆ. ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ ಫೆಬ್ರವರಿ 4 ರಂದು ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆಯನ್ನು ₹ 25 ರಷ್ಟು ಹೆಚ್ಚಿಸಲಾಗಿತ್ತು.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಎಲ್‌ಪಿಜಿ ಬೆಲೆಯು ಏರಿಕೆಯಾಗಿದೆ. ಅಡುಗೆ ಅನಿಲವನ್ನು ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದಿಂದ ತಯಾರಿಸಲಾಗುತ್ತದೆ.

ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...