Homeಕರ್ನಾಟಕರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

ರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

- Advertisement -
- Advertisement -

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪ್ಪಟ್ಟ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿದೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, “ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ತೀರಿಕೊಂಡಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ಸಂಪೂರ್ಣ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮಳೆ ಬಂದು ಫೈಪ್ ಒಡೆದು ಹೀಗಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಮತ್ತೆ ಕೆಲವರು ಬೇರೆ ಕಾರಣಯಿವೆ ಎನ್ನುತ್ತಾರೆ. ಹೀಗಾಗಿ ಟೆಕ್ನಿಕಲ್ ರಿಪೋರ್ಟ್ ತರಿಸುತ್ತೆವೆ” ಎಂದರು.

ಇದನ್ನೂ ಓದಿ:  ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

ಮುಂದುವರಿದು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ” ಎಂದರು.

ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಜೊತೆಗೆ ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ಬಲಪಂಥೀಯ ಟ್ರೋಲರ್ ಒಬ್ಬನ ಕೈಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ..: ರೋಹಿತ್ ಚಕ್ರತೀರ್ಥ ಮಾಡಿದ ಅಸಹ್ಯದ ಪೋಸ್ಟ್‌ಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...