Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...