Homeಕರ್ನಾಟಕಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಸಂವಿಧಾನ ರಚನೆಕಾರ ಅಂಬೇಡ್ಕರ್‌ ಅವರಿಗೆ ಅಗೌರವ ಸಲ್ಲಿಸಿದ್ದ ಘಟನೆ ನಡೆದಿತ್ತು. ಇದಕ್ಕೆ ಸಮರ್ಥನೆ ನೀಡಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದು, ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದಿದ್ದಾರೆ.

ರಾಯಚೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿಯೇ ಘಟನೆಯ ಬಗ್ಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ದಿನಾಂಕ 26 ರಂದು ಬೆಳಿಗ್ಗೆ 8:30 ಕ್ಕೆ ನಮ್ಮ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯದವರು ನೀಡಿದ ಎಸ್.ಒ.ಪಿ. ಪ್ರಕಾರ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಒಟ್ಟು 200 ಜನರಿಗೆ ಮೀರದಂತೆ ಸೇರಿ ಗಣರಾಜ್ಯೋತ್ಸವ ಆಚರಿಸಲು ನಿರ್ಣಾಯಿಸಿ ನೋಟಿಸ್ ನೀಡಲಾಗಿತ್ತು.

ಆದರೆ, ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು, ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ.

ಇದನ್ನೂ ಓದಿ: ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಅದೇ ಸಮಯದಲ್ಲಿ ರಾಯಚೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜೆ. ಬಸವರಾಜ ವಕೀಲರು ಬಂದು ಅವರಿಗೆ ವಿಲೇಖನಾಧಿಕಾರಿಗಳ ಸೂಚನೆಯ ಬಗ್ಗೆ ತಿಳಿಸಿ ಹೇಳಿ ಹೊರಗೆ ಕರೆದುಕೊಂಡು ಹೋದರು. ನಮ್ಮ ಸಿಬ್ಬಂದಿ ನನಗೆ ಹೊರಗಡೆ ಬಹಳ ಜನ ಸೇರಿದ್ದಾರೆ ಅಂತಾ ತಿಳಿಸಿದರು. ಅನಂತರ ನಮ್ಮ ಸಿಬ್ಬಂದಿಗೆ ಹೊರಗಡೆಯಿಂದ ಬಂದಿರುವ ಬೇರೆ ಜನರು ಹೊರಗೆ ಹೋಗಿದ್ದಾರೆ, ತಾವು ಧ್ವಜಾರೋಹಣಕ್ಕೆ ಬರಬಹುದು ಎಂದು ತಿಳಿಸಿದ ಅನಂತರ ನಾನು ನಮ್ಮ ಎಲ್ಲ ನ್ಯಾಯಾಧೀಶರನ್ನು ಕರೆದುಕೊಂಡು ಧ್ವಜಾರೋಹಣಾ ಸ್ಥಳಕ್ಕೆ ಹೋಗಿ ಧ್ವಜಾರೋಹಣ ನೆರವೇರಿಸಿರುತ್ತೇವೆ.

ಯಾವುದೇ ವ್ಯಕ್ತಿಗಳು ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದನ್ನು ಮತ್ತು ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿರುವುದಿಲ್ಲ. ಈ ಸತ್ಯ ಘಟನೆಯನ್ನು ಮರೆಮಾಚಿ ನಾನು ಅವರಿಗೆ ಡಾ. ಬಿ.ಆರ್. ಅಂಬೇಡ್ಕರವರ ಫೋಟೊ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಅಂತ ಅಪಪ್ರಚಾರ ಮಾಡಿರುತ್ತಾರೆ.

ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇರುತ್ತದೆ. ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಆಚರಣೆ ಮಾಡುತ್ತಾ ಬಂದಿದ್ದು, ಆ ಸಮಯದಲ್ಲಿ ನಾನು ಅಂತಹ ಮಹಾನ್ ವ್ಯಕ್ತಿತ್ವ, ತತ್ವ, ಆದರ್ಶ ಮತ್ತು ನಡೆ ನುಡಿಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡಿರುತ್ತೇನೆ. ಅಂತಹ ಮಹಾನ್ ವ್ಯಕ್ತಿಗೆ ನಾನು ಯಾವತ್ತು ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಆ ರೀತಿ ಅಪಪ್ರಚಾರ ಮಾಡಿದ್ದಾರೆ ಅಂತಾ ನನಗೆ ತಿಳಿಯದಾಗಿದೆ. ಕಾರಣ ಆ ವದಂತಿ ಸುಳ್ಳಾಗಿದ್ದು ಅದನ್ನು ನಂಬಬೇಡಿ ಎಂದು ಎಲ್ಲರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. It seems he’s correct, sometimes misleading information will spread like anything. Only thing, After keeping the photo, removing in front of public is not correct.

  2. General public opinion is, will there be a anything like this can happen without his guidance and knowledge??
    Being a judge of the district court can he say that I am not aware of anything like tha??
    Even let us think that Dr B.R Ambedkar photo was kept at the Dias what was the problem??
    Can anybody keep the photo like that and take out whenever they wants??

    Will there be any protocol for republic day celebration at the court premises??

    Judge should answer this questions.

    Simply can’t say something happened wiitnhout my knowledge.

    Jai Bheem!!

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...