Homeಕರ್ನಾಟಕಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

'ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ'

- Advertisement -
- Advertisement -

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಡಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆಗೆಯದಿದ್ದರೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿ ಭಾವಚಿತ್ರ ತೆರವುಗೊಳಿಸಿದ್ದ ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ವಜಾ ಮಾಡಬೇಕು ಎಂದು ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಂವಿಧಾನ ರಚನೆಕಾರನ ಚಿತ್ರವನ್ನು ಇಡಬಾರದೆ, ಸರ್ಕಾರಿ ಆದೇಶಕ್ಕೆ ಬೆಲೆಯಿಲ್ಲವೇ ಎಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ದೇವದುರ್ಗದ ಬಿಜೆಪಿ ಶಾಸಕ ಕೆ. ಶಿವನಗೌಡ ನಾಯಕ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿ ಅವರ ಭಾವಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

’ಭಾರತದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಮಾನವ ಕುಲಕ್ಕೆ ಅವಮಾನದ ವಿಚಾರ. ಬುದ್ದ, ಬಸವ, ಅಂಬೇಡ್ಕರ್‌ ಅವರ ಆದರ್ಶಗಳನ್ನು ಪಾಲಿಸುವ ನಾಡಿನಲ್ಲಿ, ಈ ನ್ಯಾಯಾಧೀಶರು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ’ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಈ ಹಿನ್ನೆಲೆಯಲ್ಲಿ, ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಬಾಬಾ ಸಾಹೇಬರ ಬಗ್ಗೆಯೇ ಇಂತಹ ವಿಕೃತ ಮನಸ್ಸು ಇರುವವರು ಉಳಿದ ಜನರಿಗೆ ಹೇಗೆ ನ್ಯಾಯ ನೀಡುತ್ತಾರೆ ಎಂಬುದು ಜನರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಅವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು. ಈ ವಿಷಯದ ಕುರಿತು ನಾನು ಸರ್ಕಾರ, ಸುಪ್ರೀಂಕೋರ್ಟ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುತ್ತೇನೆ. ಕೂಡಲೇ ಇಂತಹ ಮನಸ್ಥಿತಿಯವರನ್ನು ಹೊರ ಹಾಕುವ ಕೆಲಸವಾಗಬೇಕು” ಎಂದು ಒತ್ತಾಯಿಸಿದ್ದಾರೆ.

ರಾಯಚೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು. ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರ ನಡೆದಿದ್ದರು. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...