Homeಮುಖಪುಟರಾಯಚೂರು: ಜಾತಿ ಕಾರಣಕ್ಕೆ ಗಲಾಟೆ - ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

ರಾಯಚೂರು: ಜಾತಿ ಕಾರಣಕ್ಕೆ ಗಲಾಟೆ – ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

- Advertisement -
- Advertisement -

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಧುಮುತಿ ಗ್ರಾಮದಲ್ಲಿ ಜಾತಿ ಕಾರಣಕ್ಕೆ ಜಗಳವುಂಟಾಗಿದ್ದು, ದಲಿತ ಕೇರಿಗೆ ನುಗ್ಗಿ ಹಲವರ ಮೇಲೆ ಮಾರಣಾಂತಿಕವಾಗಿ ಗುಂಪುಹಲ್ಲೆ ಮಾಡಿದ ದುರ್ಘಟನೆ ನಿನ್ನೆ ಜರುಗಿದೆ.

ಘಟನೆಯ ಹಿನ್ನೆಲೆ

ಯುವಕರು ಕ್ರಿಕೆಟ್ ಆಡುವಾಗ ಸಣ್ಣ ವಿಷಯಕ್ಕೆ ಜಗಳ ಉಂಟಾಗಿದೆ. ಯುವಕರು ಮೈದಾನದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ನಂತರ ಜಾತಿ ಜಗಳವಾಗಿ ಪರಿವರ್ತನೆಯಾಗಿದೆ. ನಾಯಕ ಸಮುದಾಯದ ಯುವಕರು ಮತ್ತು ಮಾದಿಗ ಸಮುದಾಯದ ಯುವಕರ ಗುಂಪುಗಳಾಗಿ ವಿಭಜನೆಯಾಗಿದೆ.

ಜಗಳ ನಿಂತು ಅವರವರ ಮನೆಗೆ ತಲುಪಿದ ನಂತರವೂ ಯುವಕರ ಒಂದು ಗುಂಪು ಮಾನ್ವಿ ಸೇರಿದಂತೆ ಹಲವು ಗ್ರಾಮಗಳಿಂದ ಹುಡಗರನ್ನು ಗುಂಪು ಕಟ್ಟಿಕೊಂಡು ಬಂದು ಮಾರಕಾಸ್ತ್ರ ಮತ್ತು ಖಾರದಪುಡಿಯನ್ನು ಬಳಸಿ ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿ

ಘಟನೆಯಲ್ಲಿ ಆರು ಜನ ಪುರುಷರು ಸೇರಿ ಇಬ್ಬರು ಮಹಿಳೆಯರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 7 ಜನರು ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಘಟನೆಯಿಂದ ಧುಮುತಿ ಗ್ರಾಮದ ಕೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಭಯಭೀತಿಗೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಘಟನೆಗೆ ಕಾರಣವಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ.

ಎಫ್‌ಐಆರ್‌

ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಖಂಡನೆ

ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿಯನ್ನು ಸಿಂಧನೂರಿನ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕೆಲವರು ದುರುದ್ದೇಶಪೂರ್ವಕವಾಗಿ ಇಡೀ ದಲಿತ ಕೇರಿಯನ್ನು ಟಾರ್ಗೆಟ್ ಮಾಡುವ ಮೂಲಕ ಸಿಕ್ಕ ಸಿಕ್ಕವರನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಗೆ ನಾರಾಯಣ ರೆಡ್ಡಿ ಮತ್ತು ಅಣ್ಣಾಜಿಗೌಡ ಮೂಲ ಸೂತ್ರದಾರರಾಗಿದ್ದು, ದೌರ್ಜನ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಇಷ್ಟು ವರ್ಷಗಳಾದರೂ ದಲಿತರ ಮೇಲೆ ದೌರ್ಜನ್ಯ, ಗೂಂಡಾಗಿರಿ ಹಾಗೂ ಗುಂಪುದಾಳಿ ನಡೆಯುತ್ತಿರುವುದು ಮಾನವ ಸಮಾಜವೇ ತಲೆತಗ್ಗಿಸುವ ನಾಚಿಕಗೇಡಿನ ಸಂಗತಿಯಾಗಿದೆ. ಹಾಗಾಗಿ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಬೇಕು. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಚಿಕಿತ್ಸೆ ಒದಗಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಧುಮುತಿ ಗ್ರಾಮಕ್ಕೆ ತಹಸೀಲ್ದಾರ್ ಸೇರಿ ಅಧಿಕಾರಿಗಳ ತಂಡ ಖುದ್ದು ಭೇಟಿ ನೀಡಿ ಶಾಂತಿ ಸಭೆ ನಡೆಸಬೇಕು. ಘಟನೆಯಲ್ಲಿ ಹಲ್ಲೆಗೊಳಗಾದ ಸಂತ್ರಸ್ತರಿಗೆ ಸರಕಾರದಿಂದ 5 ಲಕ್ಷ ರೂ ಪರಿಹಾರ ನೀಡಬೇಕು. ತಾಲೂಕಿನಲ್ಲಿ, ಪ್ರತಿ ತಿಂಗಳು ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಹಾಗೂ ದಲಿತ-ಪ್ರಗತಿಪರ ಸಂಘಟನೆಗಳ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೇಳಿಕೆಯಲ್ಲಿ ಸಿಂಧನೂರಿನ ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...