Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಸಾಮಾಜಿಕ ಜಾಲತಾಣದಲ್ಲಿ ನ್ಯಾಯಧೀಶ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜಿನ ಗೌಡ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಬುಧವಾರ ನಡೆದಿದ್ದು, ದೇಶದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ  ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರನಡೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಿರಿಯ ಚಿಂತಕ, ಸಾಹಿತಿ ರಹಮತ್‌ ತರಿಕೆರೆ, “ನ್ಯಾಯನೀಡುವ ಮತ್ತು ಅಧಿಕಾರ ನಡೆಸುವ ಜಾಗಗಳಲ್ಲಿ ದಲಿತರನ್ನು‌, ಮಹಿಳೆಯರನ್ನು, ಮುಸ್ಲಿಮರನ್ನು, ಬುಡಕಟ್ಟು ಜನರ ಕುರಿತು, ಆಳದಲ್ಲಿ ಹೆಪ್ಪುಗೊಂಡಿರುವ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಈ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ, ಧಾರ್ಮಿಕ ದ್ವೇಷದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವ ಕೇಳಿರುವೆ. ಕೋಚೆಯವರೂ ಇಂತಹ ಅನುಭವ ಹೇಳುತ್ತಿದ್ದರು. ಭಯವಾಗುತ್ತದೆ. ದುಃಖವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಅವರು, “’ಬಾಬಾ ಸಾಹೇಬ್ ಅಂಬೇಡ್ಕರ್ ಪೋಟೊ ಬೇಡ ಎಂದವರು
ದೇಶದ್ರೋಹಿ ಎಂದು ಜನರು ತೀರ್ಪು ನೀಡಿದ್ದಾರೆ” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಸನತ್‌ ಕುಮಾರ್‌‌ ಬೆಳಗಲಿ, “ಪ್ರಜಾರಾಜ್ಯ ದಿನದಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊ ಇದ್ದರೆ ಧ್ವಜಾರೋಹಣ ಮಾಡುವದಿಲ್ಲ ಎಂದು ಧಿಮಾಕು ತೋರಿಸಿದ ರಾಯಚೂರು ಜಿಲ್ಲಾ ಮನುವಾದಿ ನ್ಯಾಯಾಧೀಶನ ವರ್ತನೆ ಖಂಡನೀಯ. ಈ ಅವಿವೇಕಿಗೆ ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ರಾಜೀನಾಮೆ ಕೊಟ್ಟು ತೊಲಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌‌ಟಾಗ್ರಾಮ್‌‌‌ನಲ್ಲಿ ಅಂಬೇಡ್ಕರ್‌ ಮತ್ತು ಅವರ ಪತ್ನಿಗೆ ಅವಹೇಳನ: FIR ದಾಖಲು

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ.

ಅಂಬೇಡ್ಕರ್ ಸಂವಿಧಾನದ ಕೃಪೆಯಿಂದ ನ್ಯಾಯಾಧೀಶನಾದ ಶೂದ್ರನೊಬ್ಬ, ಅಂಬೇಡ್ಕರ್ ಫೋಟೋ ಇದ್ಧರೆ ಧ್ವಜಾರೋಹಣ ಮಾಡುವುದಿಲ್ಲ ಅಂತಾನಲ್ಲ… ತಿಂದ ಬಟ್ಟಲಿಗೆ ಹೇಲುವುದು ಎಂದರೆ ಇದೇ ಅಲ್ಲವೇ ? ಮುಂದೊಂದು ದಿನ ಬರಲಿದೆ, ಗಾಂಧಿಯ ಜೊತೆಗೆ ಮನು ಮಹರ್ಷಿಯ ಫೋಟೋ ಇಟ್ಟು ಗಣರಾಜ್ಯೋತ್ಸವ ಆಚರಿಸುವ ದಿನ. ಆ ಪುಣ್ಯ ದಿನಕ್ಕಾಗಿ ನಾವೆಲ್ಲರೂ ಕಾಯೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. This is utter stupidity by that idoit, though he took oath before swearing in the name of constitution of India. Then how he can do these insult act. Useless and hopeless .

  2. ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ, ನಮ್ಮ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವುದು ಕಂಡನಾರ್ಹ. ಈ ನ್ಯಾಯಾದೀಶರ ವಿರುದ್ಧ ಕರ್ನಾಟಕ ಹೈಕೋರ್ಟ್ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇವತ್ತು ಫೋಟೋ ತೆಗೆದಿರುವುದನ್ನು ನಾವು ಒಕ್ಕೊರಲಿನಿಂದ ಪ್ರತಿಭಟನೆ ಮಾಡದಿದ್ದರೆ, ನಾಳೆ ನಮ್ಮ ಸಂವಿಧಾನವನ್ನು ಪಕ್ಕಕ್ಕೆ ಸರಿಸಿ, ಆ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...