Homeಮುಖಪುಟದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

- Advertisement -
- Advertisement -

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಸಾವು-ನೋವುಗಳ ವಿಡಿಯೊಗಳನ್ನು ಹೊಂದಿರುವ 285 ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ಎಕ್ಸ್‌ಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಸಾವು-ನೋವುಗಳ ವಿಡಿಯೋಗಳನ್ನು ಹಂಚಿಕೊಳ್ಳುವುದು ನೈತಿಕ ಮಾನದಂಡಗಳಿಗೆ ಮಾತ್ರ ವಿರುದ್ಧವಾಗಿಲ್ಲ, ಅದು ಎಕ್ಸ್‌ನ ನೀತಿಗೆ ವಿರುದ್ಧವಾಗಿದೆ. ಏಕೆಂದರೆ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುವುದರಿಂದ ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಇಂತಹ ವಿಷಯಗಳು ಭಾರತೀಯ ರೈಲ್ವೆಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಫೆಬ್ರವರಿ 17 ರಂದು ಕಳುಹಿಸಿರುವ ನೋಟಿಸ್‌ನಲ್ಲಿ ರೈಲ್ವೆ ಸಚಿವಾಲಯ ಹೇಳಿದ್ದು, 36 ಗಂಟೆಗಳಲ್ಲಿ ವಿಡಿಯೋ ಲಿಂಕ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

ಮೃತ ವ್ಯಕ್ತಿಗಳನ್ನು ತೋರಿಸಿದ, ಕಾಲ್ತುಳಿತ ಸಂಭವಿಸಿದ ನಂತರದ ರೈಲ್ವೆ ನಿಲ್ದಾಣದ ದೃಶ್ಯ ಹೊಂದಿರುವ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದೂ ಸೇರಿದಂತೆ ಹಲವು ವಿಡಿಯೋಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ನೋಟಿಸ್‌ನಲ್ಲಿ ಸೂಚಿಸಿದೆ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಕಳುಹಿಸಿ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಜನವರಿಯಲ್ಲಿ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗೆ ನೋಟಿಸ್ ನೀಡಿದ್ದ ಸರ್ಕಾರ, ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆ ಹದೆಗಡೆಸುವ, ದಾರಿತಪ್ಪಿಸುವ ಮತ್ತು ಸೂಕ್ಷ್ಮ/ಪ್ರಚೋದನಕಾರಿ ಮಾಹಿತಿಯನ್ನು ಒಳಗೊಂಡಿರುವ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿತ್ತು.

ನೋಟಿಸ್‌ನಲ್ಲಿ ಒಂದು ಯೂಟ್ಯೂಬ್ ವಿಡಿಯೊ, ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್ ಮತ್ತು ಎರಡು ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಪಟ್ಟಿ ಮಾಡಲಾಗಿತ್ತು. ಈ ನೋಟಿಸ್ ನಿರ್ದಿಷ್ಟ ಘಟನೆಗೆ ಸಂಬಂಧಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿಗಳು ಹೇಳಿವೆ.

ಡಿಸೆಂಬರ್‌ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ನೇರ ತೆಗೆದು ಹಾಕುವ ಅಧಿಕಾರವನ್ನು ಪಡೆದ ನಂತರ ಮೊದಲ ಬಾರಿಗೆ ಪ್ರಮುಖ ವಿಷಯವೊಂದಕ್ಕೆ ಸಂಬಂಧಿಸಿದಂತೆ ನೋಟಿಸ್ ನಿಡಲಾಗಿದೆ.

ದ್ವೇಷ ಭಾಷಣದ ವೀಡಿಯೊ ಹಂಚಿಕೆ: ಬಿಜೆಪಿಯ ಶಾಸಕ ರಾಜಾ ಸಿಂಗ್‌ ನ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತಗೆದುಹಾಕಿದ ಮೆಟಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...