Homeಮುಖಪುಟರೈಲುಗಳಲ್ಲಿ ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳ ಬಳಕೆಗೆ ನಿಷೇಧ ಹೇರಿದ ರೈಲ್ವೆ ಇಲಾಖೆ

ರೈಲುಗಳಲ್ಲಿ ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳ ಬಳಕೆಗೆ ನಿಷೇಧ ಹೇರಿದ ರೈಲ್ವೆ ಇಲಾಖೆ

- Advertisement -
- Advertisement -

ರೈಲುಗಳಲ್ಲಿ ಬೆಂಕಿ ಆಕಸ್ಮಿಕಗಳನ್ನು ತಪ್ಪಿಸುವ ಸಲುವಾಗಿ ರಾತ್ರಿ ವೇಳೆಯಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ಮಾರ್ಚ್ 13 ರಂದು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾತ್ರಿ 11 ರಿಂದ ಬೆಳಿಗ್ಗೆ 5 ಗಂಟೆಯರವರೆಗೆ ಪ್ರಯಾಣಿಕರನ್ನು ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಬಂದ್ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

“ಇದು ಎಲ್ಲಾ ರೈಲ್ವೆ ವಲಯಗಳಿಗೆ ರೈಲ್ವೆ ಮಂಡಳಿಯ ಸೂಚನೆಯಾಗಿದೆ. ಮಾರ್ಚ್ 16 ರಿಂದ ನಾವು ಅದನ್ನು ಕಾರ್ಯಗತಗೊಳಿಸಲು ಪ್ರಾರಂಭಿಸಿದ್ದೇವೆ” ಎಂದು ಪಶ್ಚಿಮ ರೈಲ್ವೆಯ ಸಿಪಿಆರ್‌ಒ ಸುಮಿತ್ ಠಾಕೂರ್  ತಿಳಿಸಿದ್ದಾರೆ.

ಈ ಸೂಚನೆಗಳು ಹೊಸದಲ್ಲ, ಆದರೆ ರೈಲ್ವೆ ಮಂಡಳಿಯ ಹಿಂದಿನ ಆದೇಶಗಳನ್ನು ಮತ್ತೆ ಹೇಳಲಾಗಿದೆ ಎಂದು ದಕ್ಷಿಣ ರೈಲ್ವೆ ಸಿಪಿಆರ್‌ಒ ಬಿ.ಗುಗನೇಶನ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ಮಾರ್ಚ್ 13 ರಂದು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಇತರ ಏಳು ಬೋಗಿಗಳಿಗೆ ಹರಡಿತ್ತು. ಇದಾದ ಕೇವಲ ಆರು ದಿನಗಳ ನಂತರ, ರಾಂಚಿ ನಿಲ್ದಾಣದಲ್ಲಿ ಗೂಡ್ಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ನಂತರ, ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ವಿಚ್ ಆಫ್ ಮಾಡಲು 2014 ರಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ಶಿಫಾರಸು ಮಾಡಿದ್ದರು.

“ರೈಲಿನಲ್ಲಿ ಇತ್ತೀಚಿನ ಬೆಂಕಿ ಆಕಸ್ಮಿಕ ಘಟನೆಗಳ ದೃಷ್ಟಿಯಿಂದ ಈ ನಿರ್ಧಾರ. ಇದು ಮುನ್ನೆಚ್ಚರಿಕೆ ಕ್ರಮವಾಗಿದ್ದು, ಇದಕ್ಕೂ ಮುಂಚೆಯೇ ರೈಲ್ವೆ ಮಂಡಳಿ ಇಂತಹ ಆದೇಶಗಳನ್ನು ಹೊರಡಿಸಿತ್ತು. ರಾತ್ರಿ 11 ರಿಂದ 5 ರವರೆಗೆ ರೈಲಿನಲ್ಲಿ ಮೇನ್ ಸ್ವಿಚ್ ಆಫ್ ಮಾಡಲಾಗುತ್ತದೆ” ಎಂದು ಗುಗನೇಶನ್ ಮಾಹಿತಿ ನೀಡಿದ್ದಾರೆ.

ಬೆಂಕಿ ಅಕಸ್ಮಿಕ ಘಟನೆಗಳ ವಿರುದ್ಧ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ರೈಲ್ವೆ ಪ್ರಯಾಣಿಕರು ಮತ್ತು ನೌಕರರು ಸೇರಿದಂತೆ ಎಲ್ಲಾ ಸಿಬ್ಬಂದಿಗೂ ಶಿಕ್ಷಣ ನೀಡಲು ಏಳು ದಿನಗಳ ಜಾಗೃತಿ ಅಭಿಯಾನ ನಡೆಸಲು ರಾಷ್ಟ್ರೀಯ ಸಾರಿಗೆ ವಲಯ ರೈಲ್ವೆಗೆ ಸೂಚನೆ ನೀಡಿದೆ.


ಇದನ್ನೂ ಓದಿ: ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...