Homeಮುಖಪುಟವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

- Advertisement -
- Advertisement -

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

“ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೋಮು ಸಿದ್ಧಾಂತ ತುರುಕಿಸಲು ರೈಲ್ವೆಯನ್ನು ಬಳಸಲಾಗುತ್ತಿದೆ” ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಸರ್ಕಾರಿ ಕಾರ್ಯಕ್ರಮ ಕೂಡ ‘ಕೇಸರೀಕರಣ’ದಿಂದ ಹೊರತಾಗಿಲ್ಲ, ಇದು ಒಪ್ಪುವಂತದಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಮುಖ್ಯಮಂತ್ರಿ ‘ಮಕ್ಕಳ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕನ್ನು’ ಅಗೌರವಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ ರೈಲಿನ ಮೊದಲ ಸಂಚಾರದ ವೇಳೆ ಕೊಚ್ಚಿಯ ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಇಪ್ಪತ್ತು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ‘ಪರಮಪವಿತ್ರಮಥಮೀ ಮನ್ನಿಲ್ ಭಾರತಾಂಬಾಯೆ ಪೂಜಿಕ್ಕಾನ್’ ಗೀತೆ ಹಾಡಿದ್ದಾರೆ. ಇದರ ವಿಡಿಯೋವನ್ನು ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ ಎಂದು ವರದಿಗಳು ಹೇಳಿವೆ.

ನಾವು ದಕ್ಷಿಣ ರೈಲ್ವೆಯ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋ ಕಂಡು ಬಂದಿದೆ. “ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರದ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಶಾಲಾ ಗೀತೆಯನ್ನು ಸುಂದರವಾಗಿ ಹಾಡಿದರು” ಎಂದು ವಿಡಿಯೋ ಜೊತೆಗೆ ರೈಲ್ವೆ ಬರೆದುಕೊಂಡಿದೆ.

ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿದೆ ಮತ್ತು ಆರ್‌ಎಸ್‌ಎಸ್‌ನ ಶಿಕ್ಷಣ ವಿಭಾಗವಾದ ವಿದ್ಯಾ ಭಾರತಿಯ ಕೇರಳ ಘಟಕ ಭಾರತೀಯ ವಿದ್ಯಾನಿಕೇತನ ಅಡಿಯಲ್ಲಿ ಬರುತ್ತದೆ.

ವಿವಾದದ ಕುರಿತು ಶಾಲೆಯ ಪ್ರಾಂಶುಪಾಲ ಕೆ.ಪಿ. ಡಿಂಟೊ ಪ್ರತಿಕ್ರಿಯಿಸಿದ್ದು, “ಹಾಡನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಯಾವುದೇ ಪಾತ್ರ ವಹಿಸಿಲ್ಲ ಎಂಬುವುದಾಗಿ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಟಿವಿ ಚಾನೆಲ್ ತಂಡದವರು ವಿದ್ಯಾರ್ಥಿಗಳೊಂದಿಗೆ ಹಾಡು ಹಾಡಲು ವಿನಂತಿಸಿದರು. ವಿದ್ಯಾರ್ಥಿಗಳು ವಂದೇ ಮಾತರಂ ಹಾಡಲು ಪ್ರಾರಂಭಿಸಿದಾಗ, ಟಿವಿ ಚಾನೆಲ್‌ನವರು ಮಲಯಾಳಂ ಹಾಡು ಹಾಡುವಂತೆ ಹೇಳಿದರು. ಟಿವಿ ತಂಡದ ಕೋರಿಕೆಯ ಮೇರೆಗೆ ಮಕ್ಕಳು ವಿವಿಧತೆಯಲ್ಲಿ ಏಕತೆಯನ್ನು ಆಚರಿಸುವ ಹಾಡನ್ನು ಹಾಡಿದ್ದಾರೆ”
ಎಂದು ಡಿಂಟೊ ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ.

“ವಿದ್ಯಾರ್ಥಿಗಳನ್ನು ಅವಮಾನಿಸಲು ಹಾಡಿನ ಕುರಿತು ವಿವಾದ ಸೃಷ್ಟಿಸಲಾಗಿದೆ. ಹಾಡು ರಾಷ್ಟ್ರೀಯತೆಯ ವಿರುದ್ಧವಾಗಿರಲಿಲ್ಲ ಮತ್ತು ರೈಲ್ವೆ ಹಾಡುವಂತೆ ವಿದ್ಯಾರ್ಥಿಗಳನ್ನು ಕೇಳಿರಲಿಲ್ಲ” ಎಂದು ಡಿಂಟೊ ತಿಳಿಸಿದ್ದಾರೆ.

“ವಂದೇ ಭಾರತ್ ರೈಲಿನ ಚಾಲನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆರ್‌ಎಸ್‌ಎಸ್ ಗೀತೆ ಹಾಡಿಸಿರುವುದು ಅತ್ಯಂತ ಖಂಡನೀಯ’. ಕೋಮು ಸಿದ್ಧಾಂತ ಮತ್ತು ದ್ವೇಷ ಹರಡುವಿಕೆಗೆ ಹೆಸರುವಾಸಿಯಾದ ಸಂಘಟನೆಯ ಗೀತೆಯನ್ನು ಅಧಿಕೃತ ಕಾರ್ಯಕ್ರಮದಲ್ಲಿ ಹಾಡಿಸಿರುವುದು ಸಾಂವಿಧಾನಿಕ ತತ್ವಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡಿರುವುದು ಸಂಘ ಪರಿವಾರದ ರಾಜಕೀಯವು ಪ್ರಮುಖ ರಾಷ್ಟ್ರೀಯ ಸಂಸ್ಥೆಗಳನ್ನು ಹೇಗೆ ನಾಶಪಡಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ” ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಘಟನೆಯ ಕುರಿತು ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆರ್‌ಎಸ್‌ಎಸ್ ಕಾರ್ಯಕ್ರಮವಾಗಿ ಪರಿವರ್ತಿಸಲಾಗಿದೆ. ದಕ್ಷಿಣ ರೈಲ್ವೆಯ ಅಧಿಕೃತ ಎಕ್ಸ್ ಹ್ಯಾಂಡಲ್ ಕೂಡ ಅದನ್ನು ಹೆಮ್ಮೆಯಿಂದ ಹಂಚಿಕೊಂಡಿದೆ. ಇದು ಯಾವುದೇ ವಿಭಜಕ ಸಿದ್ಧಾಂತವಲ್ಲ, ಪ್ರತಿಯೊಬ್ಬ ನಾಗರಿಕರಿಗೂ ಸೇರಿದ ರಾಷ್ಟ್ರೀಯ ಸಂಸ್ಥೆಯಾದ ಭಾರತೀಯ ರೈಲ್ವೆಯ ಸ್ಪಷ್ಟ ದುರುಪಯೋಗವಾಗಿದೆ” ಎಂದು ಕೆ.ಸಿ ವೇಣುಗೋಪಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್, “ನೀವು (ಪಿಣರಾಯಿ ವಿಜಯನ್‌) ಸ್ಪಷ್ಟವಾಗಿ ಖಂಡಿಸುತ್ತಿರುವುದು ಯಾವುದನ್ನು? ಮಕ್ಕಳು ತಾವು ಇಷ್ಟಪಟ್ಟ ಹಾಡು ಹಾಡಿರುವುದನ್ನಾ? ಅವರು ತಮ್ಮ ಮಾತೃಭೂಮಿಯ ಬಗ್ಗೆ ದೇಶಭಕ್ತಿ ಗೀತೆ ಹಾಡಿರುವುದನ್ನಾ?” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಯೊಬ್ಬರು ಮಕ್ಕಳ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಇಷ್ಟೊಂದು ಅಗೌರವಿಸುವುದು ಹೇಗೆ?” ಎಂದು ಕೇಳಿದ್ದಾರೆ.

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...