Homeಕರ್ನಾಟಕಭಾರಿ ಮಳೆ: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಆಗಸ್ಟ್ 30 ರಂದು ರಜೆ ಘೋಷಣೆ

ಭಾರಿ ಮಳೆ: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಆಗಸ್ಟ್ 30 ರಂದು ರಜೆ ಘೋಷಣೆ

- Advertisement -
- Advertisement -

ಬೆಂಗಳೂರು ನಗರ ಪಾಲಿಕೆ ಆಯುಕ್ತರು ಮಳೆಯ ಕಾರಣ ಆಗಸ್ಟ್ 30 ರಂದು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಳೆಯ ಹಿನ್ನಲೆಯಲ್ಲಿ ಮೈಸೂರು ಮತ್ತು ಮಂಡ್ಯದಲ್ಲಿ ಮಂಗಳವಾರವೂ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನ್ಯೂಸ್‌ ಮಿನಿಟ್‌ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನ ಹಲವೆಡೆ ಜಲಾವೃತವಾಗಿದೆ. ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನಗಳು ಕೊಚ್ಚಿ ಹೋಗಿದೆ. ಬೇರೆ ಮಾರ್ಗಗಳ ಮೂಲಕ ಸಂಚರಿಸುವಂತೆ ಅಧಿಕಾರಿಗಳು ಜನರನ್ನು ವಿನಂತಿಸಿದ್ದಾರೆ.

ಇದನ್ನೂ ಓದಿ: ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಹವಾಮಾನ ಮುನ್ಸೂಚನೆಯ ಪ್ರಕಾರ, ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ.

“ಬಿಬಿಎಂಪಿ ಪ್ರದೇಶದಲ್ಲಿ ವ್ಯಾಪಕವಾದ ಮಧ್ಯಮ ಅಥವಾ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರಬಹುದು” ಎಂದು ಹವಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಮವಾರ ಹಲವೆಡೆ ಜಲಾವೃತವಾಗಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ಬೆಂಗಳೂರು ನಗರದಲ್ಲಿ ಸೋಮವಾರ 124 ಮಿಮೀ ಮಳೆಯಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ರಾಮನಗರದಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...