Homeಕರ್ನಾಟಕಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

ಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

- Advertisement -
- Advertisement -

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ರವಾನಿಸಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಉತ್ತರ ಒಳನಾಡಿನ ಇತರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ದಾವಣಗೆರೆಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆಗಸ್ಟ್ 10 ರವರೆಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಕೃಷಿ ಭೂಮಿ, ರಸ್ತೆಗಳು, ಇತರ ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿ ಮತ್ತು ಈ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ರಾಜ್ಯಾದ್ಯಂತ ಆಗಿರುವ ಹಾನಿಯ ಸಮೀಕ್ಷೆ ನಡೆಸಿದ ಅಧಿಕಾರಿಗಳ ತಂಡಗಳು, ಜೂನ್ ಮೊದಲ ವಾರ ಮತ್ತು ಜುಲೈ 16ರ ನಡುವೆ 5,771 ಹೆಕ್ಟೇರ್ ಕೃಷಿ ಭೂಮಿ, ಜುಲೈ 16 ಮತ್ತು ಆಗಸ್ಟ್ ಎರಡನೇ ವಾರದ ನಡುವೆ 10,984 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿವೆ ಎಂದು ಅಂದಾಜಿಸಿವೆ.

370ರಷ್ಟು ಭೂ ಕುಸಿತಗಳಾಗಿವೆ. 3,600 ಕಿಮೀ ರಸ್ತೆಗಳು, 650 ಸೇತುವೆಗಳು ಹಾನಿಗೊಳಗಾಗಿವೆ ಎಂದು ಪಿಡಬ್ಲ್ಯೂಡಿ ಮತ್ತು ಜಿಲ್ಲಾ ಮೂಲಸೌಕರ್ಯ ತಂಡಗಳು ಅಂದಾಜಿಸಿವೆ. ಅಲ್ಲದೆ, 16,000 ಮನೆಗಳು ಹಾನಿಗೊಳಗಾಗಿವೆ, 400 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಮಾತನಾಡಿ, “ಪ್ರವಾಹ ಪೀಡಿತ ಜನರನ್ನು ಶಾಲಾ-ಕಾಲೇಜುಗಳಂತಹ ಸರಕಾರಿ ಸಂಸ್ಥೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

“ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಾಜನ್ ಅವರು ಬೆಳವಣಿಗೆಗಳ ಬಗ್ಗೆ ನಿಗಾ ಇರಿಸಿದ್ದಾರೆ” ಎಂದು ಇಲಾಖೆಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹೇಳಿದ್ದಾರೆ.

ಹಲವು ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಅಂಗನವಾಡಿಗಳು ಹಾನಿಗೊಳಗಾಗಿವೆ ಎಂದು ವರದಿ ತಿಳಿಸಿದೆ.

ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ಕಳೆದ ಕೆಲವು ವಾರಗಳಿಂದ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಗುರುವಾರ (ಆಗಸ್ಟ್ 4) ಹೊರಡಿಸಿದ ಹೇಳಿಕೆಯಲ್ಲಿ, “ನೀಲಗಿರಿ ಜಿಲ್ಲೆಯಲ್ಲಿ ಜೂನ್ 1 ರಿಂದ ಆಗಸ್ಟ್ 4 ರ ನಡುವೆ 67.50 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಮಳೆಯಾಗಿರುವ ಜಿಲ್ಲೆ ಇದಾಗಿದೆ” ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ವಾಡಿಕೆಗಿಂತ (256.3 ಮಿಮೀ) 99% ಹೆಚ್ಚು ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 100 ಮಿಮೀ ಮಳೆ ದಾಖಲಾಗಿದೆ. ಕೊಯಮತ್ತೂರಿನಲ್ಲಿ ಎರಡನೇ ಅತಿ ಹೆಚ್ಚು ಮಳೆಯಾಗಿದೆ (53.46), ನಂತರದ ಸ್ಥಾನದಲ್ಲಿ ಧರ್ಮಪುರಿ (38.63) ಮತ್ತು ತಿರುವಣ್ಣಾಮಲೈ (23.27) ಪ್ರದೇಶಗಳಿವೆ.

ಮಳೆಯಿಂದ ಸಂತ್ರಸ್ತರಾಗಿರುವ ಜನರಿಗೆ ಆಶ್ರಯ ನೀಡಲು ಸರ್ಕಾರ ರಾಜ್ಯಾದ್ಯಂತ ಪರಿಹಾರ ಶಿಬಿರಗಳನ್ನು ತೆರೆದಿದೆ. ಒಟ್ಟು 49 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಯಿತು. ಅದರಲ್ಲಿ ಸುಮಾರು 1,500 ಜನರು ವಾಸಿಸುತ್ತಿದ್ದಾರೆ. ಈರೋಡ್ ಮತ್ತು ನಾಮಕ್ಕಲ್ ಜಿಲ್ಲೆಗಳು ಅತಿ ಹೆಚ್ಚು ಶಿಬಿರಗಳನ್ನು ಹೊಂದಿದ್ದು, ಪ್ರತಿ ಜಿಲ್ಲೆಯಲ್ಲಿ 14 ಶಿಬಿರಗಳನ್ನು ನಡೆಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರಿಗೆ ಆಹಾರ ಮತ್ತು ಬಟ್ಟೆಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಗಸ್ಟ್ 6ರಂದು ನೀಲಗಿರಿ ಮತ್ತು ಕೊಯಮತ್ತೂರಿನಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 6 ಮತ್ತು 7 ರಂದು ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದ ಕರಾವಳಿ ಭಾಗಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 45-60 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಕೇರಳ: ಮಲ್ಲಪೆರಿಯಾರ್‌ ಅಣೆಕಟ್ಟೆಯ ಎಲ್ಲ ಗೇಟ್‌ ಓಪನ್‌

ಭಾರೀ ಮಳೆಯಿಂದಾಗಿ ಕೇರಳದ ಮುಲ್ಲಪೆರಿಯಾರ್ ಅಣೆಕಟ್ಟಿನಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಆಗಸ್ಟ್ 5ರ ಶುಕ್ರವಾರ ಸಂಜೆ 5 ಗಂಟೆಗೆ ಅದರ ಹತ್ತು ಗೇಟ್‌ಗಳನ್ನು ತೆರೆಯಲಾಯಿತು. ಒಟ್ಟು 1,876 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಅಕ್ಟೋಬರ್ 2021ರಲ್ಲಿ ಕೊನೆಯ ಬಾರಿಗೆ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿತ್ತು. ಪೆರಿಯಾರ್ ನದಿಯ ಎರಡೂ ದಡಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರುವಂತೆ ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಮನವಿ ಮಾಡಿದ್ದಾರೆ.

ಇದನ್ನೂ ಓದಿರಿ: ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಕೇರಳದಲ್ಲಿ ಆಗುತ್ತಿರುವ ಭಾರೀ ಮಳೆಯ ಅವಘಡಲ್ಲಿ ಒಟ್ಟು ಮೂರು ಜನರು ನಾಪತ್ತೆಯಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ತಿಳಿಸಿದೆ. ರಾಜ್ಯದಲ್ಲಿ 11 ಎನ್‌ಡಿಆರ್‌ಎಫ್ ತಂಡಗಳು ಸಕ್ರಿಯವಾಗಿವೆ.

ರಾಜ್ಯಾದ್ಯಂತ 342 ನಿರಾಶ್ರಿತ ಶಿಬಿರಗಳಿದ್ದು, ತ್ರಿಶೂರ್ ಮತ್ತು ಪತ್ತನಂತಿಟ್ಟದಲ್ಲಿ ಕ್ರಮವಾಗಿ 88 ಮತ್ತು 69 ನಿರಾಶ್ರಿತ ಶಿಬಿರಗಳನ್ನು ತೆರೆಯಲಾಗಿದೆ. ಈ ಶಿಬಿರಗಳಲ್ಲಿ ಒಟ್ಟು 12,195 ಜನರಿಗೆ ವಸತಿ ಕಲ್ಪಿಸಲಾಗಿದೆ ಎಂದು ಎಸ್‌ಡಿಎಂಎ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...