ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ರವಾನಿಸಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಉತ್ತರ ಒಳನಾಡಿನ ಇತರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ದಾವಣಗೆರೆಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆಗಸ್ಟ್ 10 ರವರೆಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ
ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಕೃಷಿ ಭೂಮಿ, ರಸ್ತೆಗಳು, ಇತರ ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿ ಮತ್ತು ಈ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ರಾಜ್ಯಾದ್ಯಂತ ಆಗಿರುವ ಹಾನಿಯ ಸಮೀಕ್ಷೆ ನಡೆಸಿದ ಅಧಿಕಾರಿಗಳ ತಂಡಗಳು, ಜೂನ್ ಮೊದಲ ವಾರ ಮತ್ತು ಜುಲೈ 16ರ ನಡುವೆ 5,771 ಹೆಕ್ಟೇರ್ ಕೃಷಿ ಭೂಮಿ, ಜುಲೈ 16 ಮತ್ತು ಆಗಸ್ಟ್ ಎರಡನೇ ವಾರದ ನಡುವೆ 10,984 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿವೆ ಎಂದು ಅಂದಾಜಿಸಿವೆ.
370ರಷ್ಟು ಭೂ ಕುಸಿತಗಳಾಗಿವೆ. 3,600 ಕಿಮೀ ರಸ್ತೆಗಳು, 650 ಸೇತುವೆಗಳು ಹಾನಿಗೊಳಗಾಗಿವೆ ಎಂದು ಪಿಡಬ್ಲ್ಯೂಡಿ ಮತ್ತು ಜಿಲ್ಲಾ ಮೂಲಸೌಕರ್ಯ ತಂಡಗಳು ಅಂದಾಜಿಸಿವೆ. ಅಲ್ಲದೆ, 16,000 ಮನೆಗಳು ಹಾನಿಗೊಳಗಾಗಿವೆ, 400 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.
ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಮಾತನಾಡಿ, “ಪ್ರವಾಹ ಪೀಡಿತ ಜನರನ್ನು ಶಾಲಾ-ಕಾಲೇಜುಗಳಂತಹ ಸರಕಾರಿ ಸಂಸ್ಥೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ
“ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಾಜನ್ ಅವರು ಬೆಳವಣಿಗೆಗಳ ಬಗ್ಗೆ ನಿಗಾ ಇರಿಸಿದ್ದಾರೆ” ಎಂದು ಇಲಾಖೆಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹೇಳಿದ್ದಾರೆ.
ಹಲವು ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಅಂಗನವಾಡಿಗಳು ಹಾನಿಗೊಳಗಾಗಿವೆ ಎಂದು ವರದಿ ತಿಳಿಸಿದೆ.
ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
ಕಳೆದ ಕೆಲವು ವಾರಗಳಿಂದ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಗುರುವಾರ (ಆಗಸ್ಟ್ 4) ಹೊರಡಿಸಿದ ಹೇಳಿಕೆಯಲ್ಲಿ, “ನೀಲಗಿರಿ ಜಿಲ್ಲೆಯಲ್ಲಿ ಜೂನ್ 1 ರಿಂದ ಆಗಸ್ಟ್ 4 ರ ನಡುವೆ 67.50 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಮಳೆಯಾಗಿರುವ ಜಿಲ್ಲೆ ಇದಾಗಿದೆ” ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ವಾಡಿಕೆಗಿಂತ (256.3 ಮಿಮೀ) 99% ಹೆಚ್ಚು ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 100 ಮಿಮೀ ಮಳೆ ದಾಖಲಾಗಿದೆ. ಕೊಯಮತ್ತೂರಿನಲ್ಲಿ ಎರಡನೇ ಅತಿ ಹೆಚ್ಚು ಮಳೆಯಾಗಿದೆ (53.46), ನಂತರದ ಸ್ಥಾನದಲ್ಲಿ ಧರ್ಮಪುರಿ (38.63) ಮತ್ತು ತಿರುವಣ್ಣಾಮಲೈ (23.27) ಪ್ರದೇಶಗಳಿವೆ.
ಮಳೆಯಿಂದ ಸಂತ್ರಸ್ತರಾಗಿರುವ ಜನರಿಗೆ ಆಶ್ರಯ ನೀಡಲು ಸರ್ಕಾರ ರಾಜ್ಯಾದ್ಯಂತ ಪರಿಹಾರ ಶಿಬಿರಗಳನ್ನು ತೆರೆದಿದೆ. ಒಟ್ಟು 49 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಯಿತು. ಅದರಲ್ಲಿ ಸುಮಾರು 1,500 ಜನರು ವಾಸಿಸುತ್ತಿದ್ದಾರೆ. ಈರೋಡ್ ಮತ್ತು ನಾಮಕ್ಕಲ್ ಜಿಲ್ಲೆಗಳು ಅತಿ ಹೆಚ್ಚು ಶಿಬಿರಗಳನ್ನು ಹೊಂದಿದ್ದು, ಪ್ರತಿ ಜಿಲ್ಲೆಯಲ್ಲಿ 14 ಶಿಬಿರಗಳನ್ನು ನಡೆಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರಿಗೆ ಆಹಾರ ಮತ್ತು ಬಟ್ಟೆಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಆಗಸ್ಟ್ 6ರಂದು ನೀಲಗಿರಿ ಮತ್ತು ಕೊಯಮತ್ತೂರಿನಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 6 ಮತ್ತು 7 ರಂದು ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದ ಕರಾವಳಿ ಭಾಗಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 45-60 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ಕೇರಳ: ಮಲ್ಲಪೆರಿಯಾರ್ ಅಣೆಕಟ್ಟೆಯ ಎಲ್ಲ ಗೇಟ್ ಓಪನ್
ಭಾರೀ ಮಳೆಯಿಂದಾಗಿ ಕೇರಳದ ಮುಲ್ಲಪೆರಿಯಾರ್ ಅಣೆಕಟ್ಟಿನಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಆಗಸ್ಟ್ 5ರ ಶುಕ್ರವಾರ ಸಂಜೆ 5 ಗಂಟೆಗೆ ಅದರ ಹತ್ತು ಗೇಟ್‌ಗಳನ್ನು ತೆರೆಯಲಾಯಿತು. ಒಟ್ಟು 1,876 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಅಕ್ಟೋಬರ್ 2021ರಲ್ಲಿ ಕೊನೆಯ ಬಾರಿಗೆ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿತ್ತು. ಪೆರಿಯಾರ್ ನದಿಯ ಎರಡೂ ದಡಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರುವಂತೆ ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಮನವಿ ಮಾಡಿದ್ದಾರೆ.
ಇದನ್ನೂ ಓದಿರಿ: ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ
ಕೇರಳದಲ್ಲಿ ಆಗುತ್ತಿರುವ ಭಾರೀ ಮಳೆಯ ಅವಘಡಲ್ಲಿ ಒಟ್ಟು ಮೂರು ಜನರು ನಾಪತ್ತೆಯಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ತಿಳಿಸಿದೆ. ರಾಜ್ಯದಲ್ಲಿ 11 ಎನ್‌ಡಿಆರ್‌ಎಫ್ ತಂಡಗಳು ಸಕ್ರಿಯವಾಗಿವೆ.
ರಾಜ್ಯಾದ್ಯಂತ 342 ನಿರಾಶ್ರಿತ ಶಿಬಿರಗಳಿದ್ದು, ತ್ರಿಶೂರ್ ಮತ್ತು ಪತ್ತನಂತಿಟ್ಟದಲ್ಲಿ ಕ್ರಮವಾಗಿ 88 ಮತ್ತು 69 ನಿರಾಶ್ರಿತ ಶಿಬಿರಗಳನ್ನು ತೆರೆಯಲಾಗಿದೆ. ಈ ಶಿಬಿರಗಳಲ್ಲಿ ಒಟ್ಟು 12,195 ಜನರಿಗೆ ವಸತಿ ಕಲ್ಪಿಸಲಾಗಿದೆ ಎಂದು ಎಸ್‌ಡಿಎಂಎ ತಿಳಿಸಿದೆ.
All the state governments gave done good jobs. Now governments have to focus on relief works and pay compasations.