“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳನ್ನು ಟೀಕಿಸಿ “ವಿಷಯಗಳು ಸ್ಪಷ್ಟವಾಗಿರಬೇಕು, ಸಂಸತ್ತು ನಾಟಕದ ವೇದಿಕೆಯಲ್ಲ” ಎಂದಿದ್ದರು. ಪ್ರಧಾನಿಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, “ಚುನಾವಣಾ ಪರಿಸ್ಥಿತಿ, ಎಸ್‌ಐಆರ್ ಮತ್ತು ಮಾಲಿನ್ಯ … Continue reading “ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು