Homeಕರ್ನಾಟಕ‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಯತ್ನ: ಕ್ಷಮೆ ಕೇಳಿದ ರಾಜ್ ಬಿ...

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಯತ್ನ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

- Advertisement -
- Advertisement -

ಟೋಬಿ’ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದ ಮಹಿಳೆಗೆ ಯವಕನೊಬ್ಬ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರಿನ ಸಂಗಮ್ ಚಿತ್ರಮಂದಿರದ ಹೊರಾಂಗಣದಲ್ಲಿ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಚಿತ್ರನಟ ರಾಜ್ ಬಿ ಶೆಟ್ಟಿ ಕ್ಷಮೆ ಕೋರಿದ್ದಾರೆ.

‘ದೌರ್ಜನ್ಯಕ್ಕೀಡಾದ ಯುವತಿ ಜತೆ ಕ್ಷಮೆ ಕೇಳುತ್ತೇನೆ’ ಎಂದು ರಾಜ್ ಬಿ ಶೆಟ್ಟಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

”ಸಿನಿಮಾ ವಿಮರ್ಶೆಗೆ ಒಳಪಡುವ ಮಾಧ್ಯಮವಾಗಿದೆ. ಹಣ ಕೊಡುವ ವೀಕ್ಷಕರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ಅದನ್ನು ಒಪ್ಪಿಕೊಳ್ಳುವ ಅಥವಾ ಒಪ್ಪಿಕೊಳ್ಳದೇ ಇರುವ ಸ್ವಾತಂತ್ರ್ಯ ಅವರಿಗಿದೆ. ಹಾಗಾಗಿ ಅವರು ತಮ್ಮ ಅಭಿಪ್ರಾಯ ಹೇಳಿದ ಕಾರಣಕ್ಕೆ ಯಾವುದೇ ರೀತಿಯಲ್ಲಿ ನಾವು ಕಿರುಕುಳ ನೀಡಲು ಪ್ರಯತ್ನಿಸಬಾರದು” ಎಂದು ಅವರು ಬರೆದುಕೊಂಡಿದ್ದಾರೆ.

”ವಿಡಿಯೊದಲ್ಲಿರುವವರು ನಮ್ಮ ಸಿನಿಮಾಗೆ ಸಂಬಂಧಪಟ್ಟವರಲ್ಲ ಆದರೂ ನಾನು ಕಿರುಕುಳಕ್ಕೆ ಒಳಗಾದ ಯುವತಿಯ ಜತೆ ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ ಎಂದು  ರಾಜ್‌ ಬಿ ಶೆಟ್ಟಿ ಕ್ಷಮೆ ಕೇಳಿದ್ದಾರೆ.

ಏನಿದು ಘಟನೆ?

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಮಹಿಳೆ ‘ಚಿತ್ರ ಚೆನ್ನಾಗಿಲ್ಲ’ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದು ಯುವಕ ವರ್ತನ ವಿರುದ್ಧ ನಟ್ಟಿಗರು ಕಿಡಿಕಾಡಿದ್ದಾರೆ.

ಇದನ್ನೂ ಓದಿ: ‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...