Homeಕರ್ನಾಟಕಆ.31ರಂದು 'ರಾಜಭವನ ಚಲೋ' : ಡಿಸಿಎಂ ಡಿ ಕೆ ಶಿವಕುಮಾರ್

ಆ.31ರಂದು ‘ರಾಜಭವನ ಚಲೋ’ : ಡಿಸಿಎಂ ಡಿ ಕೆ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಆಗಸ್ಟ್ 31ರಂದು ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು (ಆ.27) ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್‌ನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.

“ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದರೆ, ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಹೀಗಾಗಿ, ಕಳೆದ ವಾರ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ಕಳುಹಿಸಿದ್ದೆವು. ಮಖ್ಯಮಂತ್ರಿಗಳ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನ್ಯಾಯಾಲಯ ಕಾನೂನಿನ ಪ್ರಕಾರ ಯಾವ ತೀರ್ಮಾನ ಮಾಡಬೇಕೋ ಮಾಡಲಿದೆ” ಎಂದರು.

ಹೆಚ್​ಡಿಕೆ ವಿರುದ್ದ ಕಿಡಿ

“ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಅವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ನಾನು ಸಹಿಯೇ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು” ಎಂದು ಡಿಕೆಶಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.

“ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ? ಎಂದು ಪ್ರಶ್ನಿಸಿದರು.

“ನಾನು ಅವರ ಕುಟುಂಬದ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದೆ. ಈವರೆಗೂ ಅವರು ಅದಕ್ಕೆ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ? ಎಂದೆಲ್ಲಾ ಅವರು ಕಿಡಿಕಾರಿದ್ದಾರೆ. ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುವುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ, ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ, ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...