Homeಮುಖಪುಟರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ವ್ಯವಹಾರದಿಂದ ರಾಜ್‌ ಕುಂದ್ರಾ ಅವರು ಪ್ರತಿದಿನ 6 ರಿಂದ 8 ಲಕ್ಷ ರೂ. ಸಂಪಾದನೆ ಮಾಡುತ್ತಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಮಿಲಿಂದ್ ಭರಂಬೆ ತಿಳಿಸಿದ್ದಾರೆ. ರಾಜ್‌ ಕುಂದ್ರಾ ಅವರು ಯುಕೆ ಮೂಲದ ಬ್ರದರ್-ಇನ್‌-ಲಾ ಪ್ರದೀಪ್ ಬಕ್ಷಿಯ ಕೆನ್ರಿನ್ ಲಿಮಿಟೆಡ್ ಜೊತೆ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಅವರು ಭಾರತದಿಂದ ವೀಡಿಯೊಗಳನ್ನು ಹಾಟ್‌ಶಾಟ್ ಎಂಬ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗದ ಕಾರಣ, ಅವರು ಅವುಗಳನ್ನು ವೆಟ್ರಾನ್ಸ್‌ಫರ್ ಮೂಲಕ ವಿದೇಶಿ ಪ್ಲಾಟ್‌ಫಾರ್ಮ್‌ಗೆ ಕಳುಹಿಸುತ್ತಿದ್ದರು” ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದರು.

“ಮುಂಬೈ ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಹಾಟ್‌ಶಾಟ್ ಚಿತ್ರಗಳು, ವಿಡಿಯೋ ತುಣುಕುಗಳು ಮತ್ತು ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರಾ ಅವರು ಈ ವ್ಯವಹಾರದಿಂದ ಪ್ರತಿದಿನ ಸುಮಾರು 6 ರಿಂದ 8 ಲಕ್ಷಗಳನ್ನು ಗಳಿಸುತ್ತಿದ್ದರು. ಹಣಕಾಸಿನ ವಹಿವಾಟಿನ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿವೆ. ನಿಖರವಾದ ಗಳಿಕೆಯನ್ನು ಪಡೆಯಲು ನಾವು ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ. ಇದನ್ನು ಅಪರಾಧದ ಆದಾಯವೆಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ನಾವು ವಿವಿಧ ಖಾತೆಗಳಲ್ಲಿ 7.5 ಕೋಟಿ ರೂಗಳನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈಗ ಹೆಚ್ಚು ಪ್ರಚಲಿತದಲ್ಲಿರುವ ವೆಬ್ ಶೋಗಳಲ್ಲಿ ಅವಕಾಶ ನೀಡುವ ನೆಪದಲ್ಲಿ ಸಣ್ಣ ಸಣ್ಣ ನಟರನ್ನು ಆಮಿಷಕ್ಕೆ ಒಳಪಡಿಸಲಾಗಿದೆ. ಅವರನ್ನು ಬೋಲ್ಡ್‌ ಸೀನ್‌ಗಳಲ್ಲಿ ನಟಿಸುವಂತೆ ಕೇಳಲಾಗಿದೆ. ಅವರ ಇಚ್ಛೆಗೆ ವಿರುದ್ದವಾಗಿ ಅರೆ-ನಗ್ನ ಮತ್ತು ನಗ್ನ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗೆ ದೌರ್ಜನ್ಯಕ್ಕೆ ಒಳಗಾದವರಲ್ಲಿ ಕೆಲವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಈ ಹಿಂದೆ ಭರಂಬೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದರು.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...