Homeಕರ್ನಾಟಕರಾಜಭವನ ಚಲೋ: ಡಿಕೆಶಿ, ಸಿದ್ದರಾಮಯ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು

ರಾಜಭವನ ಚಲೋ: ಡಿಕೆಶಿ, ಸಿದ್ದರಾಮಯ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಫ್ರೀಡಂ ಪಾರ್ಕ್​ನಲ್ಲಿ ಜಮಾವಣೆಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಪಕ್ಷ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ಮೆರವಣಿಗೆ ಹೊರಟಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಮಹಾರಾಣಿ ಕಾಲೇಜು ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಫ್ರೀಡಂ ಪಾರ್ಕ್​ನಲ್ಲಿ ಜಮಾವಣೆಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು. ಈ ವೇಳೆ ಪೊಲೀಸರು ಎಲ್ಲರನ್ನೂ ತಡೆದು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ…

ಫ್ರೀಡಂ ಪಾರ್ಕ್​ನಲ್ಲಿ ನಡೆದ​ ಸಮಾವೇಶದಲ್ಲಿ ಮಾತನಾಡಿ ಡಿ.ಕೆ. ಶಿವಕುಮಾರ್, “ಮೂರು ಮರಣಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದೀರಿ. ಪ್ರಧಾನಮಂತ್ರಿ ಗಮನ ಸೆಳೆಯಲು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಈ ಹೋರಾಟ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ” ಎಂದು ಹೇಳಿದರು.

“ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ” ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಕರೆ ನೀಡಿದ್ದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ” ಎಂದು ಶಿವಕುಮಾರ್ ಆರೋಪಿಸಿದ್ದರು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...