Homeಮುಖಪುಟರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

- Advertisement -
- Advertisement -

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ  ಮೂವರು ಆರೋಪಿಗಳನ್ನು ಪೊಲೀಸರು ಚಂಡೀಗಢದಲ್ಲಿ ಬಂಧಿಸಿದ್ದಾರೆ.

ಜೈಪುರದ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗಢ್‌ನ ನಿತಿನ್ ಫೌಜಿ, ಉಧಮ್ ಸಿಂಗ್ ಬಂಧಿತರು. ರಾಜಸ್ಥಾನ ಪೊಲೀಸರು ಮತ್ತು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಜೈಪುರ ಪೊಲೀಸರ ವಶಕ್ಕೆ ನೀಡಲಾಗಿದೆ.

ಈ ಮೊದಲು ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಘೋಷಿಸಲಾಗಿತ್ತು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಚಂಡೀಗಢದ ಸೆಕ್ಟರ್ 22ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಬಲಪಂಥೀಯ ಸಂಘಟನೆಯಾದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಡಿ.5ರಂದು ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

ಶೂಟೌಟ್‌ನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಲಾಗಿತ್ತು. ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡಾರಾ ಕಪುರಿಸರ್ ಗೊಗಮೆಡಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದ. ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

ಸುಖದೇವ್ ಸಿಂಗ್ ಗೊಗಮೆಡಿ ಅವರು ಲೋಕೇಂದ್ರ ಸಿಂಗ್ ಕಲ್ವಿಯವರ ರಜಪೂತ್ ಕರ್ಣಿ ಸೇನೆಯ ಭಾಗವಾಗಿದ್ದರು. ಈ ಸಂಘಟನೆ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿತ್ತು. ನಂತರ ಆಂತರಿಕ ಗಲಾಟೆಯಿಂದ ಗೊಗಮೆಡಿ ತಮ್ಮದೇ ಪ್ರತ್ಯೇಕ ಕರ್ಣಿ ಸೇನೆಯನ್ನು ಕಟ್ಟಿದ್ದರು.

ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ‘ಪದ್ಮಾವತ್’ ಸಿನಿಮಾ ವಿರೋಧಿಸಿ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣದ ನಂತರ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುವ ಗೊಗಮೆಡಿ ಬೆಳಕಿಗೆ ಬಂದಿದ್ದರು.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ವೃದ್ಧನಿಗೆ ಉಗುಳು ನೆಕ್ಕುವಂತೆ ಬಲವಂತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಿಡಿಪಿ

ತುರ್ತುಪರಿಸ್ಥಿತಿಯನ್ನು ಇಂದಿರಾ ಗಾಂಧಿ ತಪ್ಪು ಎಂದು ಒಪ್ಪಿಕೊಂಡಿದ್ದರು, ಬಿಜೆಪಿ ಹಿಂದಿನದನ್ನು ಮರೆಯಬೇಕು: ಪಿ. ಚಿದಂಬರಂ

0
ತುರ್ತು ಪರಿಸ್ಥಿತಿ ಕಹಿ ನೆನಪಿಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನೇತೃತ್ವದ ಕೇಂದ್ರವು ಜೂನ್ 25 (ಗುರುವಾರ) ಆಚರಿಸುವುದಾಗಿ ಘೋಷಿಸಿದ ನಂತರ, ತಮ್ಮ ನಿರ್ಧಾರ ತಪ್ಪು ಎಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ...