Homeಮುಖಪುಟರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

- Advertisement -
- Advertisement -

ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲಿನ ಅಬ್ಬರಕ್ಕೆ 28ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ 11 ಜನ ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ ಬಳಿಯ ವಾಚ್ ಟವರ್‌ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು, 11 ರಿಂದ 12 ಜನ ಗಾಯಗೊಂಡಿದ್ದಾರೆ.

ಅಮೆರ್‌ ಪ್ಯಾಲೆಸ್‌ ಬಳಿಯ ವಾಚ್‌ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

“ಇದುವರೆಗೆ 11 ಜನರು ಸಾವನ್ನಪ್ಪಿದ್ದಾರೆ. 11 ರಿಂದ 12 ಜನರು ಗಾಯಗೊಂಡಿದ್ದಾರೆ” ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಹುಟ್ಟಿದ ತಂಗಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣ: ರಾಯಚೂರಿನಲ್ಲೊಂದು ಅಮಾನುಷ ಘಟನೆ

“ಭಾನುವಾರ ರಾತ್ರಿ 7.30 ರ ಸುಮಾರಿಗೆ ಅಮೆರ್ ಕೋಟೆಯ ಎದುರಿನ ಬೆಟ್ಟಗಳಲ್ಲಿರುವ ವಾಚ್ ಟವರ್‌ನಲ್ಲಿ ಸಿಡಿಲು ಮಿಂಚು ಬಡಿದು ಈ ಘಟನೆ ನಡೆದಿದೆ. ದುರಂತದ ಸ್ಥಳದಲ್ಲೇ ಒಂಬತ್ತು ಮೃತದೇಹಗಳು ಪತ್ತೆಯಾಗಿವೆ.  ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕರು ”ಎಂದು ಅಮೆರ್ ಪೊಲೀಸ್ ಠಾಣೆ ಎಸ್‌ಎಚ್‌ಒ ಶಿವನಾರಾಯಣ್ ಹೇಳಿದ್ದಾರೆ.

ಘಟನೆಯ ನಂತರ, ಆರೋಗ್ಯ ಸಚಿವ ರಘು ಶರ್ಮಾ ಅವರು ಗಾಯಾಳುಗಳನ್ನು ದಾಖಲಿಸಿದ್ದ ಎಸ್ಎಂಎಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದಾರೆ. ದುರಂತದ ವೇಳೆ ವಾಚ್ ಟವರ್‌ ಮೇಲೆ  27  ಜನರು ಇದ್ದರು ಎನ್ನಲಾಗಿದೆ.

ಇತ್ತ ಕೋಟಾದ ಗಾರ್ಡಾ ಗ್ರಾಮದಲ್ಲಿ, ಮಳೆಯಿಂದ ಮರದ ಕೆಳಗೆ ಆಶ್ರಯ ಪಡೆಯುತ್ತಿದ್ದ ನಾಲ್ಕು ಜನರು ಸಿಡಿಲು ಬಡಿದು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜ್ಯಪಾಲ ಕಲ್ರಾಜ್ ಮಿಶ್ರಾ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ:“ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದಿದ್ದೇನೆ” -ಕಪಾಳಮೋಕ್ಷಕ್ಕೆ ಡಿಕೆಶಿ ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾರರ ಹೆಸರು ಕೈಬಿಟ್ಟ ಹಗರಣ; ಬಿಜೆಪಿ ಪಕ್ಷದ ಕೈವಾಡದ ಆರೋಪ

0
ಭಾರತದ ಪ್ರಜಾಪ್ರಭುತ್ವದಲ್ಲಿ ಗ್ರಾಮ ಪಂಚಾಯ್ತಿಯಿಂದ ಹಿಡಿದು ಸಂಸತ್‌ವರೆಗೆ ಹಲವು ಹಂತಗಳ ಚುನಾವಣೆಗಳಲ್ಲಿ ಮತ ಚಲಾಯಿಸುವ ಮೂಲಕ ಜನಪ್ರತಿನಿಧಿಗಳನ್ನು ಮತದಾರರು ಆರಿಸುವುದಲ್ಲದೆ, ಆಳುವ ಸರ್ಕಾರಗಳನ್ನು ನಿರ್ಧರಿಸುತ್ತಾರೆ. ಈ ಚುನಾವಣಾ ವ್ಯವಸ್ಥೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕಾದದ್ದು...