Homeಮುಖಪುಟರಾಜಸ್ತಾನ: 11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ರಾಜಸ್ತಾನ: 11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಮತ್ತೊಂದು ಪ್ರಕರಣದಲ್ಲಿ ಮೂವರು ಹುಡುಗರು ಬಂದೂಕು ತೋರಿಸಿ, ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -
- Advertisement -

31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿದೆ.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿದಾಗ ಪೊಲೀಸರಿಗೆ ವಿಷಯ ತಿಳಿದಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ. ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ಆದರೆ, ಮರ್ಯಾದೆಗೆ ಅಂಜಿದ ಕುಟುಂಬವು ದೌರ್ಜನ್ಯವನ್ನು ರಹಸ್ಯವಾಗಿರಿಸಿತ್ತು ಎಂದು ಸಿಂಗನಾ ಪೊಲೀಸ್ ಠಾಣೆ ಎಸ್‌ಎಚ್‌ಒ ಭಜನಾ ರಾಮ್ ತಿಳಿಸಿದ್ದಾರೆ.

7ನೇ ತರಗತಿಯ ವಿದ್ಯಾರ್ಥಿಯು ತನ್ನ ಸರ್ಕಾರಿ ಶಾಲೆಯ ಪಠ್ಯಪುಸ್ತಕದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳನ್ನು ಪಡೆದುಕೊಂಡು ಗುರುವಾರ ಸಹಾಯವಾಣಿಗೆ ಕರೆ ಮಾಡಿ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಆಕೆಯನ್ನು ಸಂಪರ್ಕಿಸಿ ವಿಚಾರಿಸಿದರು. ನಂತರ, ಪೊಲೀಸ್ ಸೂಪರಿಂಟೆಂಡೆಂಟ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು ಎಂದು ಪೊಲೀಸರು ಹೇಳಿದ್ದಾರೆ.

ಅಲ್ವಾರ್ ಜಿಲ್ಲೆಯ ನಿವಾಸಿಯಾದ ಆರೋಪಿ ಶಿಕ್ಷಕ ಕೇಶವ್ ಯಾದವ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಆತನ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರೋಪಿಯು ಶಿಕ್ಷಕಿಯೊಬ್ಬರನ್ನು ವಿವಾಹವಾಗಿದ್ದನು. ಆತನ ತಂದೆಯೂ ನಿವೃತ್ತ ಶಿಕ್ಷಕರಾಗಿದ್ದಾರೆ. ಆತನ ಸಹೋದರಿ ಮತ್ತು ಸಹೋದರಿಯ ಪತಿ ಉಪನ್ಯಾಸಕರಾಗಿದ್ದಾರೆ ಎಂದು ತಿಳಿದು ಬಂದಿದೆ.

ಯುಪಿ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ 17 ವರ್ಷದ ಬಾಲಕಿಯನ್ನು ಮೂವರು ಯುವಕರು, ಬಂದೂಕು ತೋರಿಸಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹುಡುಗಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ, “16 ಮತ್ತು 17 ವರ್ಷ ವಯಸ್ಸಿನ ಇಬ್ಬರು ಸಹೋದರರೊಂದಿಗೆ ಮತ್ತೊಬ್ಬ ಸೇರಿ ನನ್ನ ಮಗಳನ್ನು ಅಪಹರಿಸಿದ್ದರು. ಕಸವನ್ನು ಎಸೆಯಲು ಹೋದಾಗ ಬಂದೂಕು ತೋರಿಸಿ ಆಕೆಯನ್ನು ಕಾಡಿಗೆ ಎಳೆದೊಯ್ಯಲಾಗಿತ್ತು. ಅತ್ಯಾಚಾರವೆಸಗಿ ಅಲ್ಲಿಂದ ಈ ಮೂವರು ಪರಾರಿಯಾಗಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...