Homeಚಳವಳಿರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

- Advertisement -
- Advertisement -

ರಾಜಸ್ಥಾನದಲ್ಲಿ ಈ ವರ್ಷದ ಆರಂಭದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಒಂಬತ್ತು ದಿನಗಳ ಕಾಲ ಸತತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ನ್ಯಾಯಾಲಯವು 13 ಜನರಿಗೆ ತಲಾ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೇ ಪ್ರಕರಣದಲ್ಲಿ ಮತ್ತಿಬ್ಬರು ಅಪರಾಧಿಗಳಿಗೆ ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಕೋಟಾ ನ್ಯಾಯಾಲಯ ಶನಿವಾರ ವಿಧಿಸಿದೆ.

ಫೋಕ್ಸೋ ಕಾಯಿದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ನೇತೃತ್ವ ವಹಿಸಿಕೊಂಡಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ, ಮನೆಯಿಂದ ಬಾಲಕಿಯನ್ನು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಪರಾಧಿ ಮಹಿಳೆ ಬಾಲಕಿಯನ್ನು ಮನೆಯಿಂದ ಅಪಹರಿಸಿ ಜಲಾವರ್‌ಗೆ ಕರೆದೊಯ್ದು ಅಲ್ಲಿ ಹಲವು ಮಂದಿಗೆ ಮಾರಾಟ ಮಾಡಿದ್ದರು.

13 ಅಪರಾಧಿಗಳಿಗೆ ತಲಾ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಜೊತೆಗೆ ತಲಾ 10,000 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ನಾಲ್ಕು ವರ್ಷಗಳ ಶಿಕ್ಷೆಗೆ ಒಳಗಾದವರಿಗೆ 7,000 ರೂಪಾಯಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ಈ 16 ಜನರಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಅಪರಾಧದಲ್ಲಿ ಭಾಗಿಯಾಗಿದ್ದ ಇತರ 12 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ನಾಲ್ವರು ಅಪ್ರಾಪ್ತ ಅಪರಾಧಿಗಳು ಇನ್ನೂ ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಈ ವರ್ಷದ ಮಾರ್ಚ್ 6 ರಂದು ಸುಕೇತ್ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಬ್ಯಾಗ್ ಕೊಡಿಸುವ ನೆಪದಲ್ಲಿ ಬುಲ್ಬುಲ್ ಅಲಿಯಾಸ್ ಪೂಜಾ ಜೈನ್ ಎಂಬ ಮಹಿಳೆ ಆಕೆಯನ್ನು ಕೋಟಾದಿಂದ ಅಪಹರಿಸಿದ್ದರು. ಅಲ್ಲಿಂದ ಆಕೆ ತನ್ನನ್ನು ಜಲಾವರ್‌ಗೆ ಕರೆದೊಯ್ದರು. ಅಲ್ಲಿ ಒಂಬತ್ತು ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಿದದ ಬಳಿಕ ಒಬ್ಬರ ಬಳಿಕ ಒಬ್ಬರಂತೆ ಹಲವಾರು ಜನರಿಗೆ ಹಸ್ತಾಂತರಿಸಿದರು ಎಂದು ಬಾಲಕಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ಕೋಟಾ ಪೊಲೀಸರು ಮೇ 7 ರಂದು ನ್ಯಾಯಾಲಯಕ್ಕೆ 1750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.


ಇದನ್ನೂ ಓದಿ: ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು ವಿನಹ ಇಂತ ಕೆಳಮಟ್ಟದ ಶಿಕ್ಷೇಗಳಿಂದ ಸಮಾಜದಲ್ಲಿ ಭಯದ ಬದಲು ಬಂಡತನ ಉಂಟಾಗುತ್ತೇ ಅತ್ಯಾಚಿರಿಗಳಿಗೆ ಇಂತ ವಿಷಯಗಳಲ್ಲಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...