Homeಮುಖಪುಟರಾಜಸ್ಥಾನ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದು 5 ವರ್ಷದ ಬಾಲಕ ಸಾವು, 56 ಗಂಟೆಗಳ...

ರಾಜಸ್ಥಾನ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದು 5 ವರ್ಷದ ಬಾಲಕ ಸಾವು, 56 ಗಂಟೆಗಳ ಕಾರ್ಯಾಚರಣೆ ವಿಫಲ

- Advertisement -
- Advertisement -

ರಾಜಸ್ಥಾನ ರಾಜ್ಯದ ದೌಸಾದಲ್ಲಿ 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಐದು ವರ್ಷದ ಬಾಲಕನನ್ನು ಹೊರತೆಗೆಯಲು ರಕ್ಷಣಾ ಅಧಿಕಾರಿಗಳು 56 ಗಂಟೆಗಳ ಸತತ ಪ್ರಯತ್ನಗಳ ಹೊರತಾಗಿಯೂ ಬಾಲಕ ಮೃತಪಟ್ಟಿದ್ದಾನೆ.

ಎರಡು ದಿನಗಳ ಕಾಲ ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಹೊರಗೆ ತೆಗೆಯುವಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, ಆತನನ್ನು ಹಗ್ಗದಿಂದ ಬೋರ್‌ವೆಲ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈದಾನದಲ್ಲಿ ಆಟವಾಡುತ್ತಿದ್ದ ಆರ್ಯನ್ ಬೋರ್‌ವೆಲ್‌ನಲ್ಲಿ ಬಿದ್ದಿದ್ದು, ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಪೈಪ್ ಆತನಿಗೆ ಆಮ್ಲಜನಕವನ್ನು ಪೂರೈಸಲಾಯಿತು. ಅವನ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬೋರ್‌ವೆಲ್‌ಗೆ ಕ್ಯಾಮೆರಾವನ್ನು ಸೇರಿಸಲಾಯಿತು.

ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಮಗುವನ್ನು ತಲುಪಲು ಡ್ರಿಲ್ಲಿಂಗ್ ಮೆಷಿನ್‌ಗಳನ್ನು ಬಳಸಿ ಸಮಾನಾಂತರ ಹೊಂಡವನ್ನು ತೋಡಲಾಯಿತು. ಡ್ರಿಲ್ಲಿಂಗ್ ಮೆಷಿನ್‌ನಲ್ಲಿ ತಾಂತ್ರಿಕ ದೋಷ ಮತ್ತು ಸುಮಾರು 160 ಅಡಿಗಳಷ್ಟು ನೀರಿನ ಮಟ್ಟ ಸೇರಿದಂತೆ ಕಾರ್ಯಾಚರಣೆಯಲ್ಲಿ ಅವರು ಅನೇಕ ಸವಾಲುಗಳನ್ನು ಎದುರಿಸಿದ್ದಾರೆ ಎಂದು ಅವರು ಹೇಳಿದರು.

ಆದರೆ, ಅಗೆಯುವ ಪ್ರಯತ್ನಗಳು ಪ್ರಯೋಜನವಿಲ್ಲ ಎಂದು ಗೊತ್ತಾಗಿದ್ದು, ಬಾಲಕನ ಮೇಲೆ ಮಣ್ಣು ಬಿದ್ದಿದ್ದರಿಂದ, ರಕ್ಷಣಾ ಸಿಬ್ಬಂದಿ ಅವನ ಸುತ್ತಲೂ ಹಗ್ಗವನ್ನು ಕಟ್ಟಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವನನ್ನು ಹೊರತೆಗೆದರು.

ಇದನ್ನೂ ಓದಿ; ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...