ಪಂಜಾಬ್ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಉಂಟಾಗಿದ್ದ ಬಿರುಕನ್ನು ಶಮನ ಮಾಡಿರುವ ಕಾಂಗ್ರೆಸ್, ಈಗ ತನ್ನ ಚಿತ್ತವನ್ನು ರಾಜಸ್ಥಾನದ ಕಡೆ ಹರಿಸಿದೆ. ರಾಜಸ್ಥಾನ ಕಾಂಗ್ರೆಸ್‌ನ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ ಭಾನುವಾರ ಬೆಳಗ್ಗೆಯೇ ಶಾಸಕರ ಸಭೆ ಕರೆದಿದಾರೆ.
ರಾಜಸ್ಥಾನದಲ್ಲಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಯಾವುದೇ ಸಭೆಯನ್ನು ಕರೆಯಲಾಗಿಲ್ಲ ಎಂದು ಗೋವಿಂದ್ ಸಿಂಗ್ ದೋತಾಸ್ರಾ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜಸ್ಥಾನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೆನ್ ಶನಿವಾರ ಜೈಪುರಕ್ಕೆ ಬಂದಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದಾರೆ. ಕೆ.ಸಿ.ವೇಣುಗೋಪಾಲ್ ಇದನ್ನು ಅಧಿಕೃತ ಪ್ರವಾಸ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ
ಸಚಿನ್ ಪೈಲಟ್, 18 ಶಾಸಕರೊಂದಿಗೆ ಕಳೆದ ವರ್ಷ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದರು. ಈ ವಾರದ ಆರಂಭದಲ್ಲಿ, ಸಚಿನ್ ಪೈಲಟ್ ಅವರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶೀಘ್ರದಲ್ಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.
ಕಳೆದ ತಿಂಗಳು, ಸಚಿನ್ ಪೈಲಟ್ ಜೊತೆಗಿನ ಶಾಸಕರು ಕಳೆದ ತಿಂಗಳು ಕಾಂಗ್ರೆಸ್ ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸಬೇಕು. ಕ್ಯಾಬಿನೆಟ್ ವಿಸ್ತರಣೆ ಮಾಡಬೇಕು ಮತ್ತು ಖಾಲಿ ಇರುವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದೆ.
ಗರಿಷ್ಠ 30 ಮಂತ್ರಿಗಳನ್ನು ಹೊಂದಬಹುದಾದ ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ 21 ಸದಸ್ಯರಿದ್ದು, ಒಂಬತ್ತು ಸ್ಥಾನಗಳು ಖಾಲಿ ಇವೆ. ಪಂಜಾಬ್ ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಸಾಧ್ಯತೆಯಿದ್ದು, ಸಚಿನ್ ಪೈಲಟ್ ಗುಂಪಿನ ಸದಸ್ಯರಿಗೆ ರಾಜ್ಯ ಕ್ಯಾಬಿನೆಟ್, ಪಕ್ಷ ಹಾಗೂ ರಾಜ್ಯ ಮಂಡಳಿಯಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ


