Homeಮುಖಪುಟರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಬಿಜೆಪಿ ನಾಯಕಿ 17 ವರ್ಷದ ಬಾಲಕಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಿದ್ದರು

- Advertisement -
- Advertisement -

ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ವೇಶ್ಯಾವಾಟಿಕೆ ಆರೋಪದಲ್ಲಿ ರಾಜಸ್ಥಾನದ ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೇರಿದಂತೆ ಐದು ಜನರನ್ನು ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಸರ್ಕಾರಿ ನೌಕರರಾಗಿದ್ದಾರೆ.

ಬಿಜೆಪಿ ನಾಯಕಿ ಸುನೀತಾ ವರ್ಮಾ ಅಕ್ಟೋಬರ್ 2019 ಮತ್ತು ಮೇ 2020 ರ ನಡುವೆ ಹಲವಾರು ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾರೆ ಮತ್ತು ತನ್ನ ತಂದೆಯ ಹಣವನ್ನು ಸಹ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿ ದೂರು ನೀಡಿದ್ದರು. ಬಾಲಕಿಯ ಮೇಲೆ ಮೊದಲ ಬಾರಿಗೆ ಹೋಟೆಲ್‌ ಒಂದರಲ್ಲಿ ಅತ್ಯಾಚಾರ ಎಸಗಲಾಗಿತ್ತು, ಅದನ್ನು ವಿಡಿಯೋ ಮಾಡಿದ್ದ ಆರೋಪಿ ನಂತರ ಆ ವಿಡಿಯೋ ತುಣುಕುಗಳನ್ನು ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಬಿಜೆಪಿಯ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆಯಾಗಿರುವ ಸುನೀತಾ ವರ್ಮಾ ಬಂಧನವಾಗುತ್ತಿದ್ದಂತೆ ಪಕ್ಷದಿಂದ ವಜಾ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೋ ಕಾಯ್ದೆಯಡಿ ಬಿಜೆಪಿ ನಾಯಕಿ ಮತ್ತು ಆಕೆಯ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಾಲೆಯಿಂದ ಹಿಂತಿರುಗುತ್ತಿದ್ದ ಬಾಲಕಿಯೊಂದಿಗೆ ಸುನಿತಾ ವರ್ಮಾರ ಸಹಚರರು ಸ್ನೇಹ ಬೆಳೆಸಿದ್ದರು, ನಂತರ ಸುನಿತಾ ವರ್ಮಾ ಬಾಲಕಿಯನ್ನು ಹಲವಾರು ವ್ಯಕ್ತಿಗಳನ್ನು ಭೇಟಿಯಾಗಲು ಕಳುಹಿಸುತ್ತಿದ್ದರು. 17 ವರ್ಷದ ಬಾಲಕಿಯನ್ನು ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಲಾಗಿತ್ತು ಎಂದು ಸವಾಯಿ ಮಾಧೋಪುರ್‌ ಮಹಿಳಾ ಸೆಲ್‌‌‌ನ ಅಧಿಕಾರಿ ಓಂ ಪ್ರಕಾಶ್ ಸೋಲಂಕಿ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಬಂಧಿತರಾದವರಲ್ಲಿ ಸವಾಯಿ ಮಾಧೋಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಗುಮಾಸ್ತರಾಗಿರುವ ಸಂದೀಪ್ ಶರ್ಮಾ, ಜಿಲ್ಲಾ ಕಲೆಕ್ಟರೇಟ್‌ನಲ್ಲಿ ಪಿಯೋನ್‌ ಆಗಿರುವ ಶ್ಯೋರಜ್‌ ಮೀನಾ ಮತ್ತು ಎಲೆಕ್ಟ್ರಿಷಿಯನ್‌ ರಾಜು ಲಾಲ್‌ ರಾಯಗರ ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದ

ಸುನಿತಾ ವರ್ಮಾ ಬೇರೆ ಹುಡುಗಿಯರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳು ನಡೆಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ: ಈ ಮೂರು ಪತ್ರಿಕೆಗಳನ್ನು ಮುಗಿಸಲು ಹೊರಟಿದೆಯೇ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...