Homeಮುಖಪುಟರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು.

“ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ, ಆದರೆ ದೇವಾಲಯದಲ್ಲಿ ಯಾರಿದ್ದರು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದು ಹೇಳಿರುವ ಅಹುಜಾ, 2016 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಲೈಂಗಿಕ ಅಡ್ಡೆ ಎಂದು ಕರೆದಿದ್ದರು. ಸಾಲದ್ದಕ್ಕೆ, ವಿವಿ ಆವರಣದಲ್ಲಿ ಪ್ರತಿದಿನ 3,000 ಕ್ಕೂ ಹೆಚ್ಚು ಬಳಸಿದ ಕಾಂಡೋಮ್‌ಗಳು ಮತ್ತು 2,000 ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳುವ ಮೂಲಕ  ಟೀಕೆಗೆ ಗುರಿಯಾಗಿದ್ದರು.

ಅಹುಜಾ ಅವರ ಕ್ರಮವು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜುಲ್ಲಿ ಹೇಳಿದರು. “ನಾನು ವಿಧಾನಸಭೆಯಲ್ಲಿ ಅಸ್ಪೃಶ್ಯತಾ ವಿಷಯವನ್ನು ಎತ್ತಿದ್ದೇನೆ; ಅದರ ವಿರುದ್ಧ ಅಭಿಯಾನವನ್ನು ನಡೆಸುತ್ತೇನೆ. ನನ್ನ ದಲಿತ ಗುರುತಿನ ಕಾರಣದಿಂದಾಗಿ ಬಿಜೆಪಿ ದೇವಾಲಯವನ್ನು ಶುದ್ಧೀಕರಿಸುತ್ತಿದೆ. ಇದು ನನ್ನ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲದೆ ಅಸ್ಪೃಶ್ಯತೆಗೆ ಸಂಬಂಧಿಸಿದ ಅಪರಾಧಗಳನ್ನು ಪ್ರೋತ್ಸಾಹಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆ ಎಂದರೆ. ಅವರು ದೇವಾಲಯಗಳಲ್ಲಿ ಪೂಜಿಸುವುದನ್ನು ಸಹ ನೋಡಲು ಸಾಧ್ಯವಿಲ್ಲ ಎಂದು ಜುಲ್ಲಿ ಹೇಳಿದರು. “ದೇವರುಗಳು ಅವರ (ಬಿಜೆಪಿ) ಏಕಸ್ವಾಮ್ಯವೇ? ಮುಖ್ಯಮಂತ್ರಿ (ಭಜನ್ ಲಾಲ್ ಶರ್ಮಾ) ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ (ಮದನ್ ರಾಥೋಡ್) ಅವರು ಈ ಕ್ರಮವನ್ನು ಬೆಂಬಲಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹಿಂದಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅಲ್ವಾರ್ ಗ್ರಾಮೀಣ ಕ್ಷೇತ್ರದ ಶಾಸಕರಾದ ಜುಲ್ಲಿ ಹೇಳಿದರು.

ಕಾಂಗ್ರೆಸ್ ಮಂಗಳವಾರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲು ಯೋಜಿಸಿದೆ.

ಗೆಹ್ಲೋಟ್ ಅಹುಜಾ ಅವರ ಕ್ರಮವನ್ನು ಖಂಡಿಸಿದರು, ಜೂಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಂಗಾಜಲ ಸಿಂಪಡಿಸುವುದು ಬಿಜೆಪಿಯ ದಲಿತರ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಹೇಳಿದರು. “21 ನೇ ಶತಮಾನದಲ್ಲಿ ನಾಗರಿಕ ಸಮಾಜದಲ್ಲಿ ಇಂತಹ ಸಂಕುಚಿತ ಮನೋಭಾವ ಸ್ವೀಕಾರಾರ್ಹವಲ್ಲ” ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರನ್ನು ತಮ್ಮ ಹಿರಿಯ ನಾಯಕನ ಈ ನಡವಳಿಕೆಯನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದರು. “ಈ ಹೇಯ ಕೃತ್ಯಕ್ಕಾಗಿ ಬಿಜೆಪಿ ತನ್ನ ನಾಯಕನ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಅಹುಜಾ ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸದಾ ಸುದ್ದಿಯಲ್ಲಿದ್ದಾರೆ. ಗೋ ಜಾಗರೂಕತೆಯನ್ನು ಬೆಂಬಲಿಸಿದ ಅಹುಜಾ, ಗೋ ಕಳ್ಳಸಾಗಣೆದಾರರು ಮತ್ತು ಗೋವುಗಳನ್ನು ವಧಿಸುವವರನ್ನು ಗುಂಪುಗುಂಪಾಗಿ ಕೊಲ್ಲಬೇಕೆಂದು ಕರೆ ನೀಡಿದ್ದರು. 2018 ರಲ್ಲಿ, ಅವರು ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಕರೆದರು. ಸಿಂಧಿ ಸಮುದಾಯದ ಮೇಲ್ಜಾತಿ ಅಹುಜಾ, ರಾಮಗಢದ ಮಾಜಿ ಮೂರು ಬಾರಿ ಶಾಸಕರಾಗಿದ್ದಾರೆ. ನವೆಂಬರ್‌ನಲ್ಲಿ, ಅವರ ಸೋದರಳಿಯ ಜೈ ಅಹುಜಾ ಅವರಿಗೆ ರಾಮಗಢ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ದೂರವಿತ್ತು.

‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...