Homeಮುಖಪುಟರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು 'ಗಂಡು ಮಗುವಿಗೆ ಜನ್ಮ ನೀಡಿದೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು.

ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಭರತ್‌ಪುರ ಜಿಲ್ಲೆಯ ವೀರ್‌ನ ಶಾಸಕರು, ಬಿಜೆಪಿಯ ಬಜೆಟ್‌ಗಳನ್ನು ಯೌವ್ವನದ ಮತ್ತು ಉತ್ಪಾದಕ ಎಂದು ಹೇಳಿ, ಕಾಂಗ್ರೆಸ್‌ನ ಬಜೆಟ್‌ಗಳನ್ನು ವೃದ್ಧಾಪ್ಯದ ಪ್ರತಿಬಿಂಬವೆಂದು ಚಿತ್ರಿಸಿದ್ದಾರೆ ಎಂದು ವರದಿಯಾಗಿದೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಸರ್ಕಾರವು ತನ್ನ ಮೊದಲ ಕೆಲವು ಬಜೆಟ್‌ಗಳ ಮೂಲಕ “ಗಂಡು ಮಗುವಿಗೆ ಜನ್ಮ ನೀಡಿದೆ” ಎಂದು ಅವರು ತಮ್ಮ ಮಾತುಗಳಲ್ಲಿ ಸೂಚಿಸಿದರು. ಇದು ಗಟ್ಟಿಯಾಗಿದ್ದು, ಉಪಯುಕ್ತವಾಗಿದೆ ಎಮದರು. ಒಬ್ಬರ ಯೌವನದಲ್ಲಿ ಗಂಡು ಮಗು ಹಡೆಯುವುದು ಪ್ರಯೋಜನಕಾರಿ ಎಂದು ಹೇಳಿಕೊಂಡರು.

ಅವರು ಹಿಂದಿನ ಕಾಂಗ್ರೆಸ್ ಆಡಳಿತದೊಂದಿಗೆ ಬಿಜೆಪಿಯನ್ನು ಹೋಲಿಸಿದ ಅವರು, ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ತಮ್ಮ ಅಂತಿಮ ಬಜೆಟ್ ಅನ್ನು ಮಂಡಿಸಿದಾಗ, ಅದು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ್ದಾರೆ. ಈ ಹೇಳಿಕೆಗಳ ಸಮಯದಲ್ಲಿ ಪಕ್ಕದಲ್ಲಿ ಕುಳಿತಿದ್ದ ಕೆಲವು ಬಿಜೆಪಿ ಶಾಸಕರು ನಗುತ್ತಿರುವುದು ಕಂಡುಬಂದಿದೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ

ಈ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜಲ್ಲಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕೋಲಿ ಅವರು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಈ ಹೇಳಿಕೆಗಳು ಬಿಜೆಪಿಯೊಳಗಿನ ಆಳವಾದ ಪಿತೃಪ್ರಧಾನ ಮತ್ತು ಮಹಿಳಾ ವಿರೋಧಿ ಮನೋಭಾವವನ್ನು ಪ್ರತಿಬಿಂಬಿಸುತ್ತವೆ. ಬಜೆಟ್ ಅನ್ನು ಗಂಡು ಅಥವಾ ಹೆಣ್ಣು ಮಗುವಿನ ಜನನದೊಂದಿಗೆ ಸಮೀಕರಿಸುವುದು ಸಂಕುಚಿತ ಮತ್ತು ಪ್ರತಿಗಾಮಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ಜಲ್ಲಿ ಹೇಳಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಕೋಲಿ ಹೊಗಳಿದ ಬಜೆಟ್ ಅನ್ನು ಮಹಿಳಾ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಮಂಡಿಸಿದ್ದಾರೆ. ವಿಧಾನಸಭೆಯನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸೇರಿದಂತೆ ಮಹಿಳಾ ಸ್ಪೀಕರ್ ಅಧ್ಯಕ್ಷತೆ ವಹಿಸಿದ್ದರು. ಅಂತಹ ಭಾಷೆ ಮಹಿಳೆಯರಿಗೆ ಅವಮಾನ ಮತ್ತು ಲಿಂಗ ಸಮಾನತೆಯತ್ತ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ” ಎಂದು ಜಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...