Homeಮುಖಪುಟರಾಜಸ್ಥಾನದಲ್ಲಿ ಬ್ಲಾಕ್ ಫಂಗಸ್‌ ಸಾಂಕ್ರಾಮಿಕ ರೋಗ ಎಂದು ಘೋಷಣೆ

ರಾಜಸ್ಥಾನದಲ್ಲಿ ಬ್ಲಾಕ್ ಫಂಗಸ್‌ ಸಾಂಕ್ರಾಮಿಕ ರೋಗ ಎಂದು ಘೋಷಣೆ

- Advertisement -
- Advertisement -

ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಜನರ ಮೇಲೆ ಪರಿಣಾಮ ಬೀರುತ್ತಿರುವ ಬ್ಲಾಕ್ ಫಂಗಸ್ (ಕಪ್ಪು ಶಿಲೀಂಧ್ರ) ವನ್ನು ರಾಜಸ್ಥಾನದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪ್ರಸ್ತುತ, ರಾಜಸ್ಥಾನದಲ್ಲಿ ಸುಮಾರು 100 ಮಂದಿ ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿದ್ದು, ಅವರ ಚಿಕಿತ್ಸೆಗಾಗಿ ಜೈಪುರದ ಸವಾಯಿ ಮನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜಸ್ಥಾನ ಸಾಂಕ್ರಾಮಿಕ ಕಾಯ್ದೆ 2020 ರ ಅಡಿಯಲ್ಲಿ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ  ರೋಗವೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

ಕಪ್ಪು ಶಿಲೀಂಧ್ರ ಮತ್ತು ಕೊರೊನಾ ವೈರಸ್‌ ಸೋಂಕು ಎರಡಕ್ಕೂ ಸಮಗ್ರ ಮತ್ತು ಸಂಘಟಿತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೇಳಿದ್ದಾರೆ.

ತಜ್ಞರ ಪ್ರಕಾರ, ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿಕೊಳ್ಳುವವರಲ್ಲಿ ಮತ್ತು ಮಧುಮೇಹ ಇರುವವರಲ್ಲಿ ಕಪ್ಪು ಶಿಲೀಂಧ್ರ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ‍.

ಬ್ಲಾಕ್ ಫಂಗಸ್ ಸೋಂಕಿನ ಬಗ್ಗೆ ಡಾ.ಎಚ್.ಎಸ್.ಸತೀಶ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ ಮತ್ತು ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ...

0
ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ " ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ" ಎಂದಿದ್ದಾರೆ. "ಕಾಂಗ್ರೆಸ್‌ನ ಪ್ರಣಾಳಿಕೆ...