Homeಮುಖಪುಟರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

- Advertisement -
- Advertisement -

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ ಆಗಲಿದ್ದು, 12 ಹೊಸ ಮುಖಗಳು ಸಚಿವರಾಗಲಿದ್ದಾರೆ. ಯುವ ನಾಯಕ ಸಚಿನ್‌ ಪೈಲಟ್‌‌ ಬಣದ ಐವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳಾಗಿವೆ.

ರಾಜಸ್ಥಾನ ಸಂಪುಟದ ಎಲ್ಲಾ 21 ಸದಸ್ಯರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೂವರು ಕ್ಯಾಬಿನೆಟ್ ಮಂತ್ರಿಗಳಾದ ರಘು ಶರ್ಮಾ, ಹರೀಶ್ ಚೌಧರಿ ಮತ್ತು ಗೋವಿಂದ್ ಸಿಂಗ್ ದೋತಾಸ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಶರ್ಮಾ, ಚೌಧರಿ ಮತ್ತು ದೋತಸ್ರಾ ಅವರು ಪಕ್ಷದ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವುದರಿಂದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಒಬ್ಬ ವ್ಯಕ್ತಿ, ಒಂದು ಹುದ್ದೆ” ಸೂತ್ರವನ್ನು ರಾಜ್ಯದಲ್ಲಿ ಅನ್ವಯಿಸಲಾಗಿದೆ.

ಗುಜರಾತ್‌ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿಯಾಗಿ ಶರ್ಮಾ, ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಚೌಧರಿ ಮತ್ತು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರಾಗಿ ದೋತಸ್ರಾ ಅವರನ್ನು ನೇಮಿಸಲಾಗಿದೆ.


ಇದನ್ನೂ ಓದಿರಿ: ಜಿಲ್ಲಾ ಕೋರ್ಟ್‌‌ನಲ್ಲಿ ನ್ಯಾಯಾಧೀಶರ ಮೇಲೆಯೆ ಹಲ್ಲೆ ನಡೆಸಿದ ಪೊಲೀಸರು!


ಮೂವರು ಸಚಿವರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಸಂಪುಟ ದರ್ಜೆಗೆ ಏರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ರಾಜ್ಯ ಸಚಿವ ಸಂಪುಟವು ಮೊದಲ ಬಾರಿಗೆ ನಾಲ್ವರು ಎಸ್‌ಸಿ ಸದಸ್ಯರನ್ನು ಹೊಂದಿದ್ದು, ದಲಿತರನ್ನು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಎತ್ತಿದ ನಂತರ ಕಾಂಗ್ರೆಸ್ ತೆಗೆದುಕೊಂಡ ಹೆಜ್ಜೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸಮುದಾಯದ ಮೂವರು ಸಚಿವರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಪುಟದಲ್ಲಿ ಮೂವರು ಮಹಿಳೆಯರು ಇರಲಿದ್ದು, ಮುಸ್ಲಿಂ, ಎಸ್‌ಸಿ ಮತ್ತು ಗುಜ್ಜರ್ ಸಮುದಾಯವನ್ನು ಮಹಿಳೆಯರು ಪ್ರತಿನಿಧಿಸುತ್ತಿದ್ದಾರೆ.

ರಾಜಸ್ಥಾನ ಸಂಪುಟದಲ್ಲಿ ನೂತನ ಸಚಿವರು: ಹೇಮರಾಮ್ ಚೌಧರಿ, ಮಹೇಂದ್ರಜಿತ್ ಸಿಂಗ್ ಮಾಳವೀಯ, ರಾಮ್‌ಲಾಲ್ ಜಾಟ್, ಮಹೇಶ್ ಜೋಶಿ, ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ, ಮಮತಾ ಭೂಪೇಶ್ ಭೈರ್ವಾ, ಭಜನ್‌ಲಾಲ್ ಜಾತವ್, ಟಿಕಾರಾಂ ಜೂಲಿ, ಗೋವಿಂದ್ ರಾಮ್ ಮೇಘವಾಲ್ ಮತ್ತು ಶಕುಂತಲಾ ರಾವತ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಹಿದಾ, ಬ್ರಿಜೇಂದ್ರ ಸಿಂಗ್ ಓಲಾ, ರಾಜೇಂದ್ರ ದುರ್ಹಾ ಮತ್ತು ಮುರಲೀಲಾಲ್ ಮೀನಾ ರಾಜ್ಯದ ನೂತನ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. “ಸಚಿನ್ ಪೈಲಟ್ ಬಣದಿಂದ”ನಿಂದ ಸಚಿವರಾಗಿ ಸೇರ್ಪಡೆಗೊಂಡವರಲ್ಲಿ ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ ಮತ್ತು ಹೇಮರಾಮ್ ಚೌಧರಿ ಅವರು ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಜೊತೆಗೆ ಬ್ರಿಜೇಂದ್ರ ಓಲಾ ಮತ್ತು ಮುರಾರಿ ಮೀನಾ ಅವರು ರಾಜ್ಯ ಸಚಿವರಾಗಿದ್ದಾರೆ.


ಇದನ್ನೂ ಓದಿರಿ: ಯುಪಿ: ಪಾಕ್ ಧ್ವಜ ಹಾರಿಸಿದ್ದಾರೆಂದು ನಾಲ್ವರು ಮುಸ್ಲಿಮರ ಮೇಲೆ ದೇಶದ್ರೋಹ ಪ್ರಕರಣ; ಅದು ಪಾಕ್‌ ಧ್ವಜ ಅಲ್ಲ ಎಂದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...