Homeಮುಖಪುಟರಾಜಸ್ಥಾನ: ನೂಪುರ್‌ ಶರ್ಮಾ ತಲೆ ಕತ್ತರಿಸಿ ಎಂದ ಧರ್ಮಗುರು ಅರೆಸ್ಟ್‌

ರಾಜಸ್ಥಾನ: ನೂಪುರ್‌ ಶರ್ಮಾ ತಲೆ ಕತ್ತರಿಸಿ ಎಂದ ಧರ್ಮಗುರು ಅರೆಸ್ಟ್‌

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿಯು ಈ ವಿಡಿಯೋವನ್ನು ಖಂಡಿಸಿದೆ.

- Advertisement -
- Advertisement -

ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿದ ಯಾರಿಗಾದರೂ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿದ ರಾಜಸ್ಥಾನದ ಅಜ್ಮೀರ್ ದರ್ಗಾದ ಧರ್ಮಗುರುವನ್ನು ಬಂಧಿಸಲಾಗಿದೆ.

ವಿಡಿಯೋ ಕ್ಲಿಪ್ ಆಧಾರಿಸಿ ಸೋಮವಾರ ರಾತ್ರಿ ಎಫ್‌ಐಆರ್ ದಾಖಲಿಸಿದ ನಂತರ ರಾಜಸ್ಥಾನ ಪೊಲೀಸರು ಸಲ್ಮಾನ್ ಚಿಸ್ತಿಗಾಗಿ ಹುಡುಕಾಟ ನಡೆಸಿದ್ದರು.

ಈ ಕುರಿತು ಎನ್‌ಡಿಟಿವಿ ವರದಿ ಮಾಡಿದ್ದು, “ಈ ವಿಡಿಯೊದ ಅಧಿಕೃತತೆಯನ್ನು ನಾವು ಪರಿಶೀಲಿಸಿಲ್ಲ. ನೂಪುರ್ ಶರ್ಮಾ ಅವರ ತಲೆಯನ್ನು ತನ್ನ ಬಳಿಗೆ ತರುವ ಯಾರಿಗಾದರೂ ತನ್ನ ಮನೆಯನ್ನು ನೀಡುವುದಾಗಿ ಧರ್ಮಗುರು ಹೇಳುತ್ತಾರೆ. ಪ್ರವಾದಿಯನ್ನು ಅವಹೇಳನ ಮಾಡಿದ್ದಕ್ಕಾಗಿ ನೂಪುರ್‌ ಅವರನ್ನು ಗುಂಡಿಕ್ಕಿ ಸಾಯಿಸುವುದಾಗಿ ಹೇಳಿದ್ದೂ ಕೇಳಿಬರುತ್ತಿದೆ” ಎಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಎಲ್ಲಾ ಮುಸ್ಲಿಂ ರಾಷ್ಟ್ರಗಳಿಗೆ ಉತ್ತರವನ್ನು ನೀಡಬೇಕು. ನಾನು ಇದನ್ನು ರಾಜಸ್ಥಾನದ ಅಜ್ಮೀರ್‌ನಿಂದ ಹೇಳುತ್ತಿದ್ದೇನೆ. ಈ ಸಂದೇಶವು ಹುಜೂರ್ ಖ್ವಾಜಾ ಬಾಬಾ ಕಾ ದರ್ಬಾರ್‌ನಿಂದ ಬಂದಿದೆ” ಎಂದು ಹೇಳುವ ಅವರು, ಪ್ರಸಿದ್ಧ ಸೂಫಿ ದರ್ಗಾವನ್ನು ಉಲ್ಲೇಖಿಸಿ ವೀಡಿಯೊ ಮಾಡಿದ್ದಾರೆ.

ಆರೋಪಿಯು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ದಲ್ವೀರ್ ಸಿಂಗ್ ಫೌಜ್ದಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿಯು ಈ ವಿಡಿಯೋವನ್ನು ಖಂಡಿಸಿದೆ. ಈ ದರ್ಗಾವು ಕೋಮು ಸೌಹಾರ್ದತೆಯ ಕೇಂದ್ರವಾಗಿದೆ ಎಂದು ತಿಳಿಸಿದ್ದಾರೆ.

ಖದೀಮರು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ದರ್ಗಾದ ಸಂದೇಶವೆಂದು ಪರಿಗಣಿಸಬಾರದು. ಈ ಟೀಕೆಗಳು ಒಬ್ಬ ವ್ಯಕ್ತಿಯ ಹೇಳಿಕೆಯಾಗಿದ್ದು, ಇದು ಅತ್ಯಂತ ಖಂಡನೀಯವಾಗಿದೆ ಎಂದು ಕಚೇರಿ ಸ್ಪಷ್ಟಪಡಿಸಿದೆ.

ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ ಬಳಿಕ ತನಗೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದ ಟೈಲರ್‌‌ ಕನ್ಹಯ್ಯಾ ಲಾಲ್ ಅವರನ್ನು ಉದಯಪುರದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಗಳು ಹತ್ಯೆಯನ್ನು ಚಿತ್ರೀಕರಿಸಿದ್ದರು. ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇಬ್ಬರನ್ನೂ ಬಂಧಿಸಲಾಗಿದೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌‌ ಹತ್ಯೆಯ ಆರೋಪಿಗಳಲ್ಲಿ ಒಬ್ಬ ಆರೋಪಿಯು ಬಿಜೆಪಿ ಜೊತೆಗೆ ಒಡನಾಟ ಇಟ್ಟುಕೊಂಡಿದ್ದನು ಮತ್ತು ಬಿಜೆಪಿ ಸೇರಲು ಬಯಸಿದ್ದನು ಎಂದು ಇಂಡಿಯಾ ಟುಡೆ ವರದಿ ಮಾಡಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರೊಬ್ಬರು ಆರೋಪಿಯು ಬಿಜೆಪಿ ಸದಸ್ಯ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ನೇರಾನೇರ ಆರೋಪಿಸಿದ್ದು, ಪ್ರಕರಣದ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂದು ಪ್ರಶ್ನಿಸಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ.

“ಯಾವುದೇ ಆರೋಪಿಗಳೊಂದಿಗೆ, ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ರಾಜಸ್ಥಾನ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಸಾದಿಕ್ ಖಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಹತ್ಯೆಯು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ಕಾಂಗ್ರೆಸ್ ಆರೋಪಿಸಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಬೇಕಾಗಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮುಂದಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಉದಯಪುರ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳು ಹೊರ ಹಾಕಿರುವ ವರದಿಯನ್ನು ಉಲ್ಲೇಖಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, “ಕನ್ಹಯ್ಯಾ ಲಾಲ್‌ನ ಹಂತಕ, ರಿಯಾಜ್ ಅತ್ತಾರಿ ಬಿಜೆಪಿಯ ಸದಸ್ಯ” ಎಂದು ಹೇಳಿದ್ದಾರೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದರ್ಗಾ ಗಳಲ್ಲಿ ಇರುವ ಬಾಗಶಹ ಎಲ್ಲಾ ಧರ್ಮ ಗುರುಗಳು ಇದೇ ಮನಸ್ಥಿತಿ ಉಳ್ಳವರೇ ಆಗಿದ್ದಾರೆ,ಅವರಿಗೆ ಮತಾಂದತೆಯ ಅಫೀಮು ತಲೆಗೆ ಹತ್ತಿದಾಗ ಈ ರೀತಿಯ ಹೇಳಿಕೆಗಳು ಸರ್ವೇ ಸಾಮಾನ್ಯ,ಮೊದಲು ಇವನನ್ನು ದೇಶದ್ರೋಹಿ ಕಾನೂನು ಅಡಿ ಕೇಸ್ ದಾಖಲಿಸಿ ಗಲ್ಲಿ ಗರಗಸ ಭೇಟಿ ದೆ,ಇವನಿಗೆ ನೀಡುವ ಶಿಕ್ಷೆ ಇತರರಿಗೆ ಭಯ ತರಿಸಬೇಕಿದೆ

  2. ದರ್ಗಾ ಗಳಲ್ಲಿ ಇರುವ ಬಾಗಶಹ ಎಲ್ಲಾ ಧರ್ಮ ಗುರುಗಳು ಇದೇ ಮನಸ್ಥಿತಿ ಉಳ್ಳವರೇ ಆಗಿದ್ದಾರೆ,ಅವರಿಗೆ ಮತಾಂದತೆಯ ಅಫೀಮು ತಲೆಗೆ ಹತ್ತಿದಾಗ ಈ ರೀತಿಯ ಹೇಳಿಕೆಗಳು ಸರ್ವೇ ಸಾಮಾನ್ಯ,ಮೊದಲು ಇವನನ್ನು ದೇಶದ್ರೋಹಿ ಕಾನೂನು ಅಡಿ ಕೇಸ್ ದಾಖಲಿಸಿ ಗಲ್ಲಿಗೇರಿಸಬೇಕಿದೆ,ಇವನಿಗೆ ನೀಡುವ ಶಿಕ್ಷೆ ಇತರರಿಗೆ ಭಯ ತರಿಸಬೇಕಿದೆ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...