Homeಮುಖಪುಟರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

- Advertisement -
- Advertisement -

ಮೇ 2ರಂದು ರಾಜಸ್ಥಾನದ ಜೋಧ್‌ಪುರದಲ್ಲಿ ಎರಡು ಸಮುದಾಯಗಳ ನಡುವೆ ಧಾರ್ಮಿಕ ಧ್ವಜಗಳ ವಿಚಾರದಲ್ಲಿ ಘರ್ಷಣೆಯಾಗಿದೆ. ಗಲಭೆಯಲ್ಲಿ ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈದ್-ಉಲ್-ಫಿತ್ರ್‌ನ ಹಿಂದಿನ ರಾತ್ರಿ ಸಿಎಂ ಅಶೋಕ್ ಗೆಹ್ಲೋಟ್ ಅವರ ತವರು ನೆಲವಾದ ಜೋಧ್‌ಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಘರ್ಷಣೆಗಳು ನಡೆದಿವೆ.

ಈದ್‌ ಉಲ್‌ ಫಿತ್ರ್‌‌ ಆಚರಣೆಯ ಕೆಲವು ಗಂಟೆಗಳ ಮುಂಚೆ ಈ ಪ್ರದೇಶದಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಜೋಧಪುರದಲ್ಲಿ ಮೂರು ದಿನಗಳ ಕಾಲ ಪರಶುರಾಮ ಜಯಂತಿ ಉತ್ಸವವನ್ನೂ ಆಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎನ್‌ಡಿಟಿವಿ ವರದಿ ಪ್ರಕಾರ, ಸ್ಥಳೀಯ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಮುಂಜಾನೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶಾಂತಿ, ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಮನವಿ ಮಾಡಿದ್ದಾರೆ.

ಉದ್ವಿಗ್ನತೆಯನ್ನು ‘ದುರದೃಷ್ಟಕರ’ ಎಂದು ಕರೆದಿರುವ ಸಿಎಂ, “ಎಲ್ಲಾ ರೀತಿಯಲ್ಲೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದರ ನಡುವೆ ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ಜನರು ವದಂತಿಗಳನ್ನು ಹರಡುವುದನ್ನು ತಡೆಯಲು ಜೋಧ್‌ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಲೀಸರ ರಕ್ಷಣೆಯಲ್ಲಿ ಈದ್‌ನ ನಮಾಜ್ ನಡೆಸಲಾಗಿದೆ.

ಜೋಧ್‌ಪುರದಲ್ಲಿ ಮೂರು ದಿನಗಳ ಕಾಲ ಪರಶುರಾಮ ಜಯಂತಿಯೂ ನಡೆಯುತ್ತಿದೆ. “ಕಲ್ಲು ತೂರಾಟದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಈ ರೀತಿಯ ಘರ್ಷಣೆಗಳು ನಡೆಯುತ್ತಿವೆ. ರಾಮನವಮಿ, ಹನುಮ ಜಯಂತಿ, ಈದ್‌ ಉಲ್‌ ಫಿತ್ರ್‌ ಸಂದರ್ಭದಲ್ಲಿ ಗಲಭೆಗಳನ್ನು ಸೃಷ್ಟಿಸಲಾಗುತ್ತಿದೆ. ದೆಹಲಿ, ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧೆಡೆ ಇಂತಹ ಗಲಭೆಗಳು ವರದಿಯಾಗುತ್ತಿವೆ. ದೇವರು, ಧರ್ಮ, ಹಬ್ಬಗಳೀಗ ಗಲಭೆಗಳ ಕೇಂದ್ರಬಿಂದುಗಳಾಗಿ ಬದಲಾಗುತ್ತಿವೆ.

ಹೆಚ್ಚುತ್ತಿರುವ ಗಲಭೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮೌನ ತಾಳಿರುವುದು ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...