Homeಮುಖಪುಟ4 ವರ್ಷದ ಮಗು ಮೇಲೆ ಅತ್ಯಾಚಾರ: ಸಬ್ ಇನ್ಸ್‌ಪೆಕ್ಟರ್‌ ಬಂಧನ

4 ವರ್ಷದ ಮಗು ಮೇಲೆ ಅತ್ಯಾಚಾರ: ಸಬ್ ಇನ್ಸ್‌ಪೆಕ್ಟರ್‌ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಲಾಲೋಟ್ ಪ್ರದೇಶದಲ್ಲಿ ನಡೆದಿದೆ‌.

ಭೂಪೇಂದ್ರ ಸಿಂಗ್ ಎಂಬ ಸಬ್ ಇನ್ಸ್‌ಪೆಕ್ಟರ್‌ 4 ವರ್ಷದ ಬಾಲಕಿಯನ್ನು ಶುಕ್ರವಾರ ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಸ್ಥಳೀಯ ನಿವಾಸಿಗಳು ಥಳಿಸಿದ್ದಾರೆ. ಬಳಿಕ ರಾಹುವಾಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್, ”ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಶುಕ್ರವಾರ ಮಧ್ಯಾಹ್ನ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

”ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‌ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿದ್ದಾರೆ. ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಂಗ್ ಹೇಳಿದರು.

ಸುದ್ದಿ ತಿಳಿಯುತ್ತಿದ್ದಂತೆ ರಾಹುವಾಸ್ ಪೊಲೀಸ್ ಠಾಣೆಯ ಸುತ್ತ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಅವರು ಭೂಪೇಂದ್ರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಥಳಿಸಿದರು.

ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಮಾತನಾಡಿ, ”ಲಾಲ್ಸೋಟ್‌ನಲ್ಲಿ ಏಳು ವರ್ಷದ ದಲಿತ ಬಾಲಕಿಯ ಮೇಲೆ ಪೋಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಾಗಾಗಿ ನಾನು ಸ್ಥಳಕ್ಕೆ ಬಂದಿದ್ದೇನೆ. ಅಮಾಯಕ ಮಗುವಿಗೆ ನ್ಯಾಯ ಕೊಡಿ” ಎಂದು ಆಗ್ರಹಿಸಿದರು. ಇದೇ ವೇಳೆ ಕಿರೋಡಿ ಲಾಲ್ ಮೀನಾ ಅವರು ಬಾಲಕಿಯ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಘೋಷಿಸಿದ್ದಾರೆ.

”ನಾನು ಬಾಲಕಿಗೆ ಸಹಾಯ ಮಾಡಲು ಇಲ್ಲಿಗೆ ಬಂದಿದ್ದೇನೆ. ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ. ನನಗೆ, ನಂತರ ಚುನಾವಣೆಗಳು ಬರುತ್ತವೆ, ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಇದು ನಾಚಿಕೆಗೇಡಿನ ಘಟನೆಯಾಗಿದೆ ಎಂದು ಮೀನಾ ಹೇಳಿದರು.

ಆರೋಪಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜಸ್ಥಾನ ಸರ್ಕಾರ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.

”ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಆರೋಪಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರನ್ನು ವಜಾಗೊಳಿಸಲು ಆದೇಶ ನೀಡಲಾಗಿದೆ” ಎಂದು ರಾಜಸ್ಥಾನ ಡಿಜಿಪಿ ಉಮೇಶ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದ್ವೇಷ’ ಬಿತ್ತುವ ಮೂರನೇ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡ ಬಿಜೆಪಿ: ಮೌನವಹಿಸಿರುವ ಚು. ಆಯೋಗ

0
ಲೋಕಸಭೆಯ ಹೊಸ್ತಿಲಲ್ಲಿ ಬಿಜೆಪಿ ಮೀಸಲಾತಿ ಬಗ್ಗೆ ಮುಸ್ಲಿಮರು ಮತ್ತು ಕಾಂಗ್ರೆಸ್‌ನ್ನು ಗುರಿಯಾಗಿಸಿಕೊಂಡು ದ್ವೇಷ ಬಿತ್ತುವ ಮೂರನೇ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಚು.ಅಯೋಗ ಮಾತ್ರ  ಮೌನವಾಗಿರುವುದು ಕಂಡು ಬಂದಿದೆ. ಕರ್ನಾಟಕ ಬಿಜೆಪಿ, ಮೀಸಲಾತಿ...