Homeದಲಿತ್ ಫೈಲ್ಸ್ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

- Advertisement -
- Advertisement -

9 ವರ್ಷದ ದಲಿತ ಬಾಲಕ ಸವರ್ಣೀಯರಿಗೆ ಮೀಸಲಾಗಿದ್ದ ಪಾತ್ರೆ ಮುಟ್ಟಿದನೆಂದು ಜಾತಿವಾದಿ ಶಿಕ್ಷಕ ಹೊಡೆದು ಕೊಂದ ಬಳಿಕ ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಬಿಕ್ಕಟ್ಟು ಎದುರಾಗಿದೆ.

ಪ್ರತಿಪಕ್ಷ ಬಿಜೆಪಿಯ ನಿರಂತರ ದಾಳಿಯ ಜೊತೆಗೆ, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ತನ್ನ ಪಕ್ಷದ ನಾಯಕರಿಂದಲೇ ವಿರೋಧ ಎದುರಿಸುವಂತಾಗಿದೆ.

ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪಣಚಂದ್ ಮೇಘವಾಲ್ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ್ದಾರೆ. “9 ವರ್ಷದ ವಿದ್ಯಾರ್ಥಿಯ ಸಾವಿನಿಂದ ನನಗೆ ತೀವ್ರ ನೋವಾಗಿದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಘಟಿಸುತ್ತಿರುವ ಜಾತಿ ಸಂಬಂಧಿತ ಅಪರಾಧಗಳ ಕುರಿತು ಬೇಸರ ವ್ಯಕ್ತಪಡಿಸಿರುವ ಪಣಚಂದ್‌ ಮೇಘವಾಲ್‌, ಪೊಲೀಸರು ಸಾಕಷ್ಟು ತ್ವರಿತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷಗಳ ಹಿಂದೆ ಗೆಹ್ಲೋಟ್ ಅವರ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಕೊಲೆಯಾದ ಮಗುವಿನ ಕುಟುಂಬವನ್ನು ಭೇಟಿ ಮಾಡಲು ಜಲೋರ್ ಜಿಲ್ಲೆಗೆ ತೆರಳುತ್ತಿದ್ದರು.

“ನಾವು ಜಲೋರ್‌ನಂತಹ ಘಟನೆಗಳನ್ನು ಕೊನೆಗೊಳಿಸಬೇಕಾಗಿದೆ. ದಲಿತ ಸಮುದಾಯದೊಂದಿಗೆ ನಾವು ಸದಾ ನಿಲ್ಲುತ್ತೇವೆ ಎಂಬ ಭರವಸೆ ನೀಡಬೇಕು” ಎಂದು ಪೈಲಟ್ ಹೇಳಿದ್ದಾರೆ.

“ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದು, ಮುಂದೆಯೂ ಕ್ರಮ ಕೈಗೊಳ್ಳಲಿದೆ. ಈ ರೀತಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಪೈಲಟ್‌ಗೆ ರಾಜಕೀಯ ಲಾಭ ಪಡೆಯಲು ಅವಕಾಶ ನೀಡದಿರಲು ಯೋಚಿಸಿದ ಮುಖ್ಯಮಂತ್ರಿ ಗೆಹ್ಲೋಟ್‌ ಅವರು ಇದೀಗ ಹಿರಿಯ ಕ್ಯಾಬಿನೆಟ್ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆದ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ಜಲೋರ್‌ಗೆ ಕಳುಹಿಸಿದ್ದಾರೆ.

ಜುಲೈ 20ರಂದು ಶಿಕ್ಷಕ ಹಲ್ಲೆ ನಡೆಸಿದ್ದನು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದರು.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿ, “ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದರು.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...