Homeಮುಖಪುಟರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ...

ರಾಜಸ್ಥಾನ ದಲಿತ ಬಾಲನಕ ಹತ್ಯೆ ಹಿನ್ನೆಲೆ: ತನ್ನ ತಂದೆ ಎದುರಿಸಿದ ಜಾತಿ ತಾರತಮ್ಯ ನೆನಪಿಸಿಕೊಂಡ ಮಾಜಿ ಸ್ಪೀಕರ್ ಮೀರಾ ಕುಮಾರ್!

- Advertisement -
- Advertisement -

ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕೇಂದ್ರ ಸಚಿವೆ ಮೀರಾ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ತಂದೆ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಕೂಡಾ ಜಾತಿ ವ್ಯವಸ್ಥೆಯಿಂದಾಗಿ ಎದುರಿಸಿದ್ದ ತಾರತಮ್ಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ದಲಿತ ಬಾಲಕನೊಬ್ಬ ಸವರ್ಣೀಯರಿಗೆ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿಸಿದ್ದಾರೆಂದು ಆರೋಪಕ್ಕೊಳಗಾಗಿ ಶಿಕ್ಷಕನಿಂದ ಹತ್ಯೆಯಾದ ಪ್ರಕರಣದ ವಿರುದ್ಧ ಮೀರಾ ಕುಮಾರ್ ಮಾತನಾಡಿದ್ದಾರೆ.

ಸೋಮವಾರದಂದು ಟ್ವೀಟ್‌ ಮಾಡಿರುವ ಮೀರಾ ಕುಮಾರ್ ಅವರು, “100 ವರ್ಷಗಳ ಹಿಂದೆ, ನನ್ನ ತಂದೆ ಬಾಬು ಜಗಜೀವನ್ ರಾಮ್ ಅವರಿಗೆ ಶಾಲೆಯಲ್ಲಿ ಸವರ್ಣ ಹಿಂದೂಗಳಿಗೆ ಮೀಸಲಾದ ಪಾತ್ರೆಯಿಂದ ನೀರನ್ನು ಕುಡಿಯಬಾರದು ಎಂದು ನಿಷೇಧಿಸಿದ್ದರು. ಆಗ ಅವರ ಪ್ರಾಣ ಉಳಿದಿದ್ದು ಒಂದು ಪವಾಡ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು, ಅದೇ ಕಾರಣಕ್ಕಾಗಿ ಒಂಬತ್ತು ವರ್ಷದ ದಲಿತ ಬಾಲಕನನ್ನು ಕೊಲ್ಲಲಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ, ಜಾತಿ ವ್ಯವಸ್ಥೆಯು ನಮ್ಮ ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೀರಾ ಕುಮಾರ್ ತನ್ನ ತಂದೆಯನ್ನು “ಅವಮಾನಗೊಳಿಸಲಾಗಿತ್ತು” ಮತ್ತು ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾತಿವಾದಿ ನಿಂದನೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನೇಜ್‌ಮೆಂಟ್‌ ಸರ್ಕಾರ | ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

1978 ರಲ್ಲಿ ವಾರಣಾಸಿಯಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾತನಾಡಿದ ಅವರು, ತಂದೆ ಸಂಪೂರ್ಣಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಹೋಗಿದ್ದರು. ಅಲ್ಲಿ ಅವರಿಗೆ “ಜಗಜೀವನ್‌ ‘ಚಮ್ಮಾರ್’ ಇಲ್ಲಿಂದ ಹೋಗು” ಎಂದು ಹೇಳಲಾಗಿತ್ತು” ಎಂದು ಹೇಳಿದ್ದಾರೆ.

“ಪ್ರತಿಮೆ ‘ಕಲುಷಿತ’ವಾಗಿದೆ ಎಂದು ಅವರು ಅದನ್ನು ಗಂಗಾಜಲದಿಂದ ತೊಳೆದರು… ಜಾತಿ ವ್ಯವಸ್ಥೆಯು ಪ್ರತಿಯೊಬ್ಬರನ್ನು ಆವರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಬಾಡಿಗೆಗೆ ಸ್ಥಳವನ್ನು ಹುಡುಕುತ್ತಿರುವಾಗ ತನ್ನ ಜಾತಿಯ ಕುರಿತು ಕೇಳಿರುವ ಬಗ್ಗೆ ಮೀರಾ ಕುಮಾರ್ ಅವರು ನೆನಪಿಸಿಕೊಂಡಿದ್ದಾರೆ. “ಮನೆಯನ್ನು ಬಾಡಿಗೆಗೆ ನೀಡಲು ಹೊರಟಿದ್ದ ವ್ಯಕ್ತಿ ಹಿಂದೂ ಕೂಡ ಆಗಿರಲಿಲ್ಲ. ಅವರು ಕ್ರಿಶ್ಚಿಯನ್‌ ಆಗಿದ್ದರೂ… ಅವರು ನನ್ನನ್ನು ‘ನೀವು ಬ್ರಾಹ್ಮಣರೆ?’ ಎಂದು ಕೇಳಿದರು. ನಾನು, ‘ಅಲ್ಲ, ನಾನು ಬ್ರಾಹ್ಮಣನಲ್ಲ, ಪರಿಶಿಷ್ಟ ಜಾತಿ. ನಿಮಗೆ ಏನಾದರೂ ತೊಂದರೆ ಇದೆಯೇ?’ ಎಂದೆ. ಆಗ ಅವರು, ‘ಇಲ್ಲ’ ಎಂದರು. ಆದರೆ ಅವರು ನನಗೆ ಮನೆ ಕೊಡಲೇ ಇಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ಪ್ರಕರಣ; ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ಗೆಹ್ಲೋಟ್‌

“ಈ ಬಗ್ಗೆ ನಾನು ನನ್ನ ತಂದೆಯನ್ನು, ‘ನೀವು ಸ್ವಾತಂತ್ರ್ಯಕ್ಕಾಗಿ ಏಕೆ ಹೋರಾಡಿದ್ದೀರಿ? ಈ ದೇಶ ನಿಮಗಾಗಿ ಏನನ್ನೂ ಮಾಡಿಲ್ಲ. ಅದು ನಿಮಗೆ ಅಥವಾ ನಿಮ್ಮ ಪೂರ್ವಜರಿಗೂ ಏನನ್ನೂ ನೀಡಿಲ್ಲ… ಎಂದು ಕೇಳಿದ್ದೆ’ ಅದಕ್ಕೆ ಅವರು, ‘ಸ್ವತಂತ್ರ ಭಾರತವು ಬದಲಾಗಲಿದ್ದು, ಜಾತಿ ರಹಿತ ಸಮಾಜ ನಿರ್ಮಾಣವಾಗಲಿದೆ’ ಎಂದು ಹೇಳಿದ್ದರು” ಎಂದು ಮೀರಾ ಅವರು ನೆನಪಿಸಿಕೊಂಡಿದ್ದಾರೆ.

“ಸ್ವಾತಂತ್ರ್ಯದ 75 ವರ್ಷಗಳ ನಂತರ ಕೂಡಾ ಭಾರತ ಬದಲಾಗಿಲ್ಲ ಎಂಬುವುದನ್ನು ನೋಡಲು ಅವರು ಈಗ ಇಲ್ಲ ಎಂಬುವುದೆ ನನಗೆ ಖುಷಿಯ ವಿಚಾರವಾಗಿದೆ” ಎಂದು ಮೀರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಜಲೋರ್‌ನ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪ್ರತಿಪಕ್ಷಗಳು ಮತ್ತು ಕಾಂಗ್ರೆಸ್‌ನ ಒಂದು ಬಣ ಕಿಡಿಕಾರಿದ್ದಾರೆ. ಅಲ್ಲದೆ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಮತ್ತು ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...