Homeದಲಿತ್ ಫೈಲ್ಸ್ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

- Advertisement -
- Advertisement -

ಧಾರ್ಮಿಕ ಮೆರವಣಿಗೆಯ ಸಮಯದಲ್ಲಿ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿಯ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಸೋಮವಾರ ಖಚಿತಪಡಿಸಿದ್ದಾರೆ.

ಭಾನುವಾರ ಸದಾಸರ್ ಗ್ರಾಮದಲ್ಲಿ ನಡೆದ ಈ ಘಟನೆಯು ಸೋಮವಾರ ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಗೆ ಕಾರಣವಾಯಿತು. ಕನರಾಮ್ ಮೇಘವಾಲ್ ದಾಖಲಿಸಿದ ಎಫ್‌ಐಆರ್ ಪ್ರಕಾರ, ‘ಭಗವತ್ ಕಥಾ’ ಮುಗಿದ ನಂತರ ನಡೆದ ಧಾರ್ಮಿಕ ಮೆರವಣಿಗೆಯ ಸಮಯದಲ್ಲಿ ಈ ಘಟನೆ ಭಾನುವಾರ ಸಂಜೆ ನಡೆದಿದೆ.

ಮೆರವಣಿಗೆಯನ್ನು ಪಠಣ ಸ್ಥಳದಿಂದ ಹತ್ತಿರದ ದೇವಾಲಯಕ್ಕೆ ಕರೆದೊಯ್ಯಲಾಯಿತು, ಮೇಘವಾಲ್ ಮತ್ತು ಇತರ ಕೆಲವರು ‘ದರ್ಶನ’ಕ್ಕಾಗಿ ದೇವಾಲಯಕ್ಕೆ ಪ್ರವೇಶಿಸುತ್ತಿದ್ದಾಗ, ಸೂರದಾಸ ಸ್ವಾಮಿ, ಶಂಕರ್‌ಲಾಲ್, ಹಿಮ್ಮತ್ ಕುಮಾರ್ ಮತ್ತು ಅನಿಲ್ ಸೇರಿದಂತೆ ಕೆಲವು ಹಳ್ಳಿ ಜನರು ಅವರನ್ನು ತಡೆದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ದಲಿತರು ಎಂಬ ಕಾರಣಕ್ಕಾಗಿ ಆರೋಪಿಗಳು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೇವಾಲಯದ ಪ್ರವೇಶದ್ವಾರದಲ್ಲಿ ಜನದಟ್ಟಣೆ ಇತ್ತು, ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಾಗ ಮೇಘವಾಲ್ ಮತ್ತು ಇತರರನ್ನು ದೇವಾಲಯದ ಹೊರಗೆ ಕಾಯಲು ಹೇಳಲಾಯಿತು ಎಂದು ಡಿಎಸ್‌ಪಿ ಸತ್ಯನಾರಾಯಣ್ ಗೋದಾರ ಹೇಳಿದರು.

“ತಪ್ಪಿಸಿಕೊಂಡಿರುವ ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಪತ್ತೆಹಚ್ಚಲು ಶೋಧ ನಡೆಯುತ್ತಿದೆ” ಎಂದು ಡಿಎಸ್‌ಪಿ ಹೇಳಿದರು.

ತುಮಕೂರು ಹಾಲು ಒಕ್ಕೂಟದಲ್ಲಿ ದಲಿತ ಅಧಿಕಾರಿಗೆ ಕಿರುಕುಳ; ಗೃಹ ಸಚಿವರ ತವರಿನಲ್ಲೇ ಪರಿಶಿಷ್ಟರ ಮೇಲೆ ಸರಣಿ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...