Homeಮುಖಪುಟರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

ರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

- Advertisement -
- Advertisement -

ತನ್ನ ಮೇಲೆ ಅತ್ಯಾಚಾರ ನಡೆದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು ಕ್ರಮ ಖಂಡಿಸಿ ಮಹಿಳೆಯೊಬ್ಬರು ನೀರಿನ ಟ್ಯಾಂಕ್ ಏರಿದ ಘಟನೆ ಸೋಮವಾರ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.

ವರದಿಗಳ ಪ್ರಕಾರ, ತಿಂಗಳ ಹಿಂದೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದ್ದು, ಈ ಸಂಬಂಧ ಆಕೆ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ದಾಖಲಿಸಿದ್ದಾರೆ. ಆದರೆ, ಪೊಲೀಸರು ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ.

ಪೊಲೀಸರ ನಡೆ ಖಂಡಿಸಿ ನ್ಯಾಯಕ್ಕಾಗಿ ಮಹಿಳೆ ನೀರಿನ ಟ್ಯಾಂಕ್ ಏರಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಆಕೆಯ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯ ಕೊಡಿಸುವುದಾಗಿ ಆಕೆಗ ಭರವಸೆ ನೀಡಿದ್ದಾರೆ.

ವರದಿಗಳ ಪ್ರಕಾರ, ದಲಿತ ಸಮದಾಯಕ್ಕೆ ಸೇರಿದ ಮಹಿಳೆ ಜನವರಿ 16 ರಂದು ಪಪ್ಪು ಗುಜ್ಜರ್ ಎಂಬಾತನ ವಿರುದ್ದ ಅತ್ಯಾಚಾರ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಆತನನ್ನು ಬಂಧಿಸಿಲ್ಲ. ಪೊಲೀಸರ ವಿರುದ್ದ ದಲಿತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...